Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 8ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 8) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇನ್ನು ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ನಿಧಾನವಾಗಿ ಎಂಟ್ರಿ ಕೊಡುತ್ತಲಿದೆ. ಈ ನಡುವೆಯ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾತ್ತಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.8 ಅಡಿ
* ಒಳಹರಿವು - 5,262 ಕ್ಯೂಸೆಕ್
* ಹೊರಹರಿವು - 5,052 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 63.71 ಅಡಿ
* ಒಳಹರಿವು - 308 ಕ್ಯೂಸೆಕ್
* ಹೊರಹರಿವು - 1,750 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,813.50 ಅಡಿ
* ಒಳಹರಿವು - 1,108 ಕ್ಯೂಸೆಕ್
* ಹೊರಹರಿವು 3,772.47 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 185.2 ಅಡಿ
* ಒಳಹರಿವು - 1,573 ಕ್ಯೂಸೆಕ್
* ಹೊರಹರಿವು - 3,390 ಕ್ಯೂಸೆಕ್
ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿವೆ. ಇದೀಗ ಬಹುತೇಕ ಭಾಗಗಳಲ್ಲಿ ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಚಳಿ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಆವರಿಸುವ ಮುನ್ಸೂಚನೆ ಇದೆ. ಒಟ್ಟಿನಲ್ಲಿ ಈ ಬಾರಿ ನೀರಿನ ಕೊರತೆ ಎದುರಾಗದಂತಾಗಿದೆ. ಮುಂಗಾರು ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದರಿಂದ ಜಲಮೂಲಗಳೆಲ್ಲಾ ತುಂಬಿವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕೃಷಿ ಭೂಮಿ ಹಾಗೂ ಕುಡಿಯುವ ನೀರಿಗೆ ಯಾವುದೇ ಕೊರತೆಯಾದಂತೆ ಆಗಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications