Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 9ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 9) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇನ್ನು ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ನಿಧಾನವಾಗಿ ಎಂಟ್ರಿ ಕೊಡುತ್ತಲಿದೆ. ಈ ನಡುವೆಯ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾತ್ತಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.8 ಅಡಿ
* ಒಳಹರಿವು - 5,262 ಕ್ಯೂಸೆಕ್
* ಹೊರಹರಿವು - 5,052 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 63.71 ಅಡಿ
* ಒಳಹರಿವು - 308 ಕ್ಯೂಸೆಕ್
* ಹೊರಹರಿವು - 1,750 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1813.40 ಅಡಿ
* ಒಳಹರಿವು - 2,943 ಕ್ಯೂಸೆಕ್
* ಹೊರಹರಿವು 3,746.47 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.10 ಅಡಿ
* ಒಳಹರಿವು - 983 ಕ್ಯೂಸೆಕ್
* ಹೊರಹರಿವು - 3,390 ಕ್ಯೂಸೆಕ್
ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿವೆ. ಇದೀಗ ಬಹುತೇಕ ಭಾಗಗಳಲ್ಲಿ ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಚಳಿ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಆವರಿಸುವ ಮುನ್ಸೂಚನೆ ಇದೆ. ಒಟ್ಟಿನಲ್ಲಿ ಈ ಬಾರಿ ನೀರಿನ ಕೊರತೆ ಎದುರಾಗದಂತಾಗಿದೆ. ಮುಂಗಾರು ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದರಿಂದ ಜಲಮೂಲಗಳೆಲ್ಲಾ ತುಂಬಿವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕೃಷಿ ಭೂಮಿ ಹಾಗೂ ಕುಡಿಯುವ ನೀರಿಗೆ ಯಾವುದೇ ಕೊರತೆಯಾದಂತೆ ಆಗಿದೆ.












Click it and Unblock the Notifications