Karnataka Major Reservoirs: ಕೆಆರ್‌ಎಸ್ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಅಕ್ಟೋಬರ್ 15ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಇದೀಗ ಸದ್ಯ ಕೆಲವೆಡೆ ಮಾತ್ರ ವರುಣನ ಆರ್ಭಟ ಮುಂದುವರೆದಿದೆ. ಪರಿಣಾಮ ಜಲಾಶಯನಗಳ ಒಳಹರಿವಿನ ಪ್ರಮಾಣ ಕಡಿಮೆಯಾಗುತ್ತಲಿದೆ. ಹಾಗಾದ್ರೆ ಬುಧವಾರ (ಗುರುವಾರ 15) ಕೆಆರ್‌ಎಸ್ ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆಯೇ ಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ. ಸಂಜೆ ವೇಳೆಗೆ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪರಿಣಾಮ ಕೆಲವು ಜಲಾಶಯಗಳನ್ನ ಹೊರತುಪಡಿಸಿದರೆ, ಉಳಿದ ಬಹುತೇಕ ಡ್ಯಾಂಗಳಿಗೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಲಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 100.88 ಅಡಿ
* ಒಳಹರಿವು - 574 ಕ್ಯೂಸೆಕ್
* ಹೊರಹರಿವು - 2,658 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,267.73 ಅಡಿ
* ಒಳಹರಿವು - 626 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,619.12 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 11,850 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,792.95 ಅಡಿ
* ಒಳಹರಿವು - 646 ಕ್ಯೂಸೆಕ್
* ಹೊರಹರಿವು - 4,575.71 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 173.02 ಅಡಿ
* ಒಳಹರಿವು - 354 ಕ್ಯೂಸೆಕ್
* ಹೊರಹರಿವು - 886 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,845.65 ಅಡಿ
* ಒಳಹರಿವು - 82 ಕ್ಯೂಸೆಕ್
* ಹೊರಹರಿವು - 1,850 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,892.76 ಅಡಿ
* ಒಳಹರಿವು - 867 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 517.77 ಮೀಟರ್
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 12,847 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.56 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 155 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,065.28 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
ಇನ್ನೂ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾದರೆ ಜಲಾಶಯಗಳ ಒಳಹರಿವು ಹೆಚ್ಚಾಗಲಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಲಿದೆ. ಒಂದು ವೇಳೆ ಮಳೆ ಕೈಕೊಟ್ಟರೆ ನೀರಿನ ಅಭಾವ ಎದುರಾಗಯವುದಂತೂ ಖಚಿತ ಎನ್ನಲಾಗುತ್ತಿದೆ.


Click it and Unblock the Notifications
