Karnataka Major Reservoirs: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಅಕ್ಟೋಬರ್ 18ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಇದೀಗ ಸದ್ಯ ಹಿಂಗಾರು ಚುರುಕು ಪಡೆದಿದ್ದು, ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಪರಿಣಾಮ ಜಲಾಶಯನಗಳಿವೆ ಒಳಹರಿವು ನಿಧಾನಗತಿಯಲ್ಲಿ ಹೆಚ್ಚಳ ಆಗುತ್ತಿದೆ. ಹಾಗಾದ್ರೆ ಭಾನುವಾರ (ಅಕ್ಟೋಬರ್ 18) ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗಲಿನ ವೇಳೆ ಬಿರುಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುತ್ತಿದೆ. ಆದರೂ ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪರಿಣಾಮ ಕೆಲವು ಜಲಾಶಯಗಳನ್ನ ಹೊರತುಪಡಿಸಿದರೆ, ಉಳಿದ ಡ್ಯಾಂಗಳಿಗೆ ಒಳಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 100.54 ಅಡಿ
* ಒಳಹರಿವು - 1,881 ಕ್ಯೂಸೆಕ್
* ಹೊರಹರಿವು - 2,653 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,267.85 ಅಡಿ
* ಒಳಹರಿವು - 1,376 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,617.90 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 12,227 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,792.20 ಅಡಿ
* ಒಳಹರಿವು - 1,369 ಕ್ಯೂಸೆಕ್
* ಹೊರಹರಿವು - 6,179 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 173 ಅಡಿ
* ಒಳಹರಿವು - 339 ಕ್ಯೂಸೆಕ್
* ಹೊರಹರಿವು - 617 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,845.03 ಅಡಿ
* ಒಳಹರಿವು - 1,207 ಕ್ಯೂಸೆಕ್
* ಹೊರಹರಿವು - 1,300 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,892.94 ಅಡಿ
* ಒಳಹರಿವು - 931 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 517.53 ಮೀಟರ್
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 12,315 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.53 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 164 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,065.22 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್


Click it and Unblock the Notifications
