Karnataka Dams Water Level: ರಾಜ್ಯದ ಯಾವೆಲ್ಲಾ ಪ್ರಮುಖ ಜಲಾಶಯಗಳು ಭರ್ತಿ? ಅಕ್ಟೋಬರ್ 18ರ ನೀರಿನ ಮಟ್ಟ
Karnataka Major Reservoirs Water Level: ರಾಜ್ಯದಲ್ಲಿ ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 18) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.75 ಅಡಿ
* ಒಳಹರಿವು - 9,880 ಕ್ಯೂಸೆಕ್
* ಹೊರಹರಿವು - 8,008 ಕ್ಯೂಸೆಕ್
2. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1817.40 ಅಡಿ
* ಒಳಹರಿವು - 1,083 ಕ್ಯೂಸೆಕ್
* ಹೊರಹರಿವು 3626.54 ಕ್ಯೂಸೆಕ್
3. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.1 ಅಡಿ
* ಒಳಹರಿವು - 3,204 ಕ್ಯೂಸೆಕ್
* ಹೊರಹರಿವು - 3,204 ಕ್ಯೂಸೆಕ್
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಸಹ ಭರ್ತಿಯಾದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇದೀಗ ಸದ್ಯ ಮಳೆರಾಯನ ಆರ್ಭಟ ತಗ್ಗಿದ್ದು, ಮುಂದಿನ ದಿನಗಳಲ್ಲಿ ಹಲವೆಡೆ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ.
ಇದೀಗ ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಇನ್ನು ಈ ಬಾರಿ ನದಿ, ಕರೆ-ಕಟ್ಟೆಗಳು, ಜಲಾಶಯಗಳು ತುಂಬಿದ ಹಿನ್ನೆಲೆ ನೀರಿನ ಕೊರತೆ ಇಲ್ಲದಂತಾಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಈ ನಡುವೆಯೇ ಮತ್ತೆ ಇದೀಗ ಚಂಡಮಾರುತದ ಪ್ರಭಾವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆಯಿದೆ. ಒಂದು ವೇಳೆ ಹವಾಮಾನ ಇಲಾಖೆ ಮುನ್ಸೂಚನಯಂತೆ ಮಳೆಯಾದರೆ, ಮತ್ತೆ ಜಲಾಶಯಶಯಗಳ ಒಳಹರಿವು ಹೆಚ್ಚಾಗುವುದರಲ್ಲಿ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications