Karnataka Dams Water Level: ರಾಜ್ಯದ ಯಾವೆಲ್ಲಾ ಪ್ರಮುಖ ಜಲಾಶಯಗಳು ಭರ್ತಿ? ಅಕ್ಟೋಬರ್ 27ರ ನೀರಿನ ಮಟ್ಟ
Karnataka Reservoirs Water Level: ರಾಜ್ಯದಲ್ಲಿ ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 27) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.80 ಅಡಿ
* ಒಳಹರಿವು - 18,409 ಕ್ಯೂಸೆಕ್
* ಹೊರಹರಿವು - 18,452 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.92 ಅಡಿ
* ಒಳಹರಿವು - 1,531 ಕ್ಯೂಸೆಕ್
* ಹೊರಹರಿವು - 1,429 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.60 ಮೀಟರ್
* ಒಳಹರಿವು - 10,256 ಕ್ಯೂಸೆಕ್
* ಹೊರಹರಿವು - 2,590 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,626.6 ಅಡಿ
* ಒಳಹರಿವು - 31,413 ಕ್ಯೂಸೆಕ್
* ಹೊರಹರಿವು - 31,208 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.50 ಅಡಿ
* ಒಳಹರಿವು - 1,694 ಕ್ಯೂಸೆಕ್
* ಹೊರಹರಿವು - 1,694 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,815.15 ಅಡಿ
* ಒಳಹರಿವು - 2,105 ಕ್ಯೂಸೆಕ್
* ಹೊರಹರಿವು 6,899 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 185 ಅಡಿ
* ಒಳಹರಿವು - 9,272 ಕ್ಯೂಸೆಕ್
* ಹೊರಹರಿವು - 6,876 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.84 ಅಡಿ
* ಒಳಹರಿವು - 520 ಕ್ಯೂಸೆಕ್
* ಹೊರಹರಿವು - 1,158 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,922 ಅಡಿ
* ಒಳಹರಿವು - 6,772 ಕ್ಯೂಸೆಕ್
* ಹೊರಹರಿವು - 6,723 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,858.33 ಅಡಿ
* ಒಳಹರಿವು - 802 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್












Click it and Unblock the Notifications