Karnataka Major Reservoirs: ಹಾರಂಗಿ, ಆಲಮಟ್ಟಿ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಸೆಪ್ಟೆಂಬರ್ 13ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಬಿರು ಬಿರುಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವೇ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಆಗಾಗ ತುಂತುರು ಮಳೆಯಾಗುತ್ತಿದ್ದು, ಪ್ರಮುಖ ಜಲಾಶಯಗಳಿಗೆ ಒಳಹರಿವು ಇದೆ. ಹಾಗಾದ್ರೆ ಬುಧವಾರ (ಸೆಪ್ಟೆಂಬರ್ 13) ಹಾರಂಗಿ, ಆಲಮಟ್ಟಿ ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವು ಕಡೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪರಿಣಾಮ ಕೆಲವು ಜಲಾಶಯಗಳನ್ನ ಹರತುಪಡಿಸಿದರೆ, ಉಳಿದ ಬಹುತೇಕ ಡ್ಯಾಂಗಳಿಗೆ ಒಳಹರಿವಿನ ಪ್ರಮಾಣ ತೀವ್ರವಾಗಿ ಕಡಿಮೆಯಾಗಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 105.94 ಅಡಿ
* ಒಳಹರಿವು - 6,415 ಕ್ಯೂಸೆಕ್
* ಹೊರಹರಿವು - 8,186 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,268.58 ಅಡಿ
* ಒಳಹರಿವು - 1,473 ಕ್ಯೂಸೆಕ್
* ಹೊರಹರಿವು - 1,600 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,628.58 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 9,963 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,797.15 ಅಡಿ
* ಒಳಹರಿವು - 2,338 ಕ್ಯೂಸೆಕ್
* ಹೊರಹರಿವು - 7,571 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 178.07 ಅಡಿ
* ಒಳಹರಿವು - 232 ಕ್ಯೂಸೆಕ್
* ಹೊರಹರಿವು - 788 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,855.50 ಅಡಿ
* ಒಳಹರಿವು - 142 ಕ್ಯೂಸೆಕ್
* ಹೊರಹರಿವು - 5,200 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,904.03 ಅಡಿ
* ಒಳಹರಿವು - 2,194 ಕ್ಯೂಸೆಕ್
* ಹೊರಹರಿವು - 9,980 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 519.59 ಮೀಟರ್
* ಒಳಹರಿವು - 10,123 ಕ್ಯೂಸೆಕ್
* ಹೊರಹರಿವು - 6,060 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.40 ಅಡಿ
* ಒಳಹರಿವು - 1,333 ಕ್ಯೂಸೆಕ್
* ಹೊರಹರಿವು - 2,135 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,065.92 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ತಾಲೂಕುಗಳು ರಾಜ್ಯ ಸರ್ಕಾರದ ಮೊದಲ ಹಂತದ ಬರಪೀಡಿತ ಪಟ್ಟಿಗೆ ಸೇರ್ಪಡೆಯಾದಿಲ್ಲ. ಆದರೂ ವಾಡಿಕೆಯಷ್ಟು ಮಳೆಯಾಗದಿರುವುದು ಜನರಿಗೆ ಮುಂಗಾರು ಅವಧಿಯಲ್ಲೇ ಬೇಸಿಗೆಯ ಅನುಭವ ಆಗುತ್ತಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ತಾಪಮಾನ ಗಣನೀಯವಾಗಿ ಹೆಚ್ಚಾಗಿದೆ. ಬೆಳಗಿನ ಜಾವ ತುಸು ತಂಪಾದ ಹವಾಮಾನ ಇರುತ್ತಿದೆಯಾದರೂ, ದಿನವಿಡೀ ಬಿರುಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಬರಪೀಡಿತ ಪಟ್ಟಿಯಿಂದ ಹೊರಗುಳಿಯಲು ಆಗಸ್ಟ್ ತಿಂಗಳಿನಲ್ಲಿ ಬಿದ್ದ ಉತ್ತಮ ಮಳೆಯೇ ಮುಖ್ಯ ಕಾರಣ. ಈ ಮಳೆಯು ಆರಂಭಿಕ ಅಭಾವವನ್ನು ಸರಿದೂಗಿಸಲು ನೆರವಾಯಿತು. ಸೆಪ್ಟೆಂಬರ್ ಅಂತ್ಯದವರೆಗೆ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ತದನಂತರ ನೈಋತ್ಯ ಮುಂಗಾರು ಆಗಮಿಸಿ ಈಶಾನ್ಯ ಮುಂಗಾರು ಆರಂಭವಾಗಲಿದೆ. ಆದರೆ, ಎಲ್ ನಿನೋ ಪ್ರಭಾವ ಹೆಚ್ಚುತ್ತಿರುವುದರಿಂದ ಈ ಬಾರಿ ಈಶಾನ್ಯ ಮುಂಗಾರು ಕೂಡ ದುರ್ಬಲವಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತ್ತೀಚಿನ ವರ್ಷಗಳಲ್ಲಿ ಕರಾವಳಿ ಪ್ರದೇಶಕ್ಕೆ ವಾಯುಭಾರ ಕುಸಿತವೇ ಪ್ರಮುಖ ಮಳೆಯ ಮೂಲವಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಅರೇಬಿಯನ್ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಜುಲೈ ಮತ್ತು ಆಗಸ್ಟ್‌ನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಚಂಡಮಾರುತಗಳ ತೀವ್ರತೆ ಕಡಿಮೆಯಾಗಿದೆ. ಸಮುದ್ರದಲ್ಲಿ ಸೃಷ್ಟಿಯಾಗುವ ವಾಯುಭಾರ ಕುಸಿತ ಚಂಡಮಾರುತವಾಗಿ ಮಾರ್ಪಡದೇ ಬೇಗನೆ ಕ್ಷೀಣಿಸುತ್ತಿವೆ. ಇದರಿಂದ ಮಳೆಯ ಪ್ರಮಾಣ ಇದೀಗ ಕಡಿಮೆಯಾಗಿದೆ ಎನ್ನಬಹುದು.


Click it and Unblock the Notifications
