ಕೆಆರ್‌ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ
Karnataka Reservoirs Water Level: ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಸೆಪ್ಟೆಂಬರ್ 13) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ, ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಸಲಾಗಿದೆ.

ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124 ಅಡಿ
* ಒಳಹರಿವು - 12,021 ಕ್ಯೂಸೆಕ್
* ಹೊರಹರಿವು - 16,657 ಕ್ಯೂಸೆಕ್
ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1817.40 ಅಡಿ
* ಒಳಹರಿವು - 5,506 ಕ್ಯೂಸೆಕ್
* ಹೊರಹರಿವು 3,658 ಕ್ಯೂಸೆಕ್
ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.535 ಟಿಎಂಸಿ
* ಇಂದಿನ ನೀರಿನ ಮಟ್ಟ - 185.1 ಅಡಿ
* ಒಳಹರಿವು - 5,336 ಕ್ಯೂಸೆಕ್
* ಹೊರಹರಿವು - 4,120 ಕ್ಯೂಸೆಕ್
ಈಗಾಗಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದ ಪರಿಣಾಮ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಸಹ ಭರ್ತಿಯಾದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಕಳೆದ ಕೆಲವು ವಾರಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಮುಂದಿನ ದಿನಗಳಲ್ಲಿ ಹಲವೆಡೆ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಗ ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಕಳೆದ ಕೆಲವು ದಿನಗಳ ಹೆಚ್ಚುವರಿ ನೀರನ್ನು ಒಂದೇ ಬಾರಿ ಬಿಡಲಾಗಿತ್ತು. ಈ ವೇಳೆ ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿತ್ತು. ಇದೀಗ ಮಳೆ ತಗ್ಗಿದ ಹಿನ್ನೆಲೆ ನದಿತೀರಗಳ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಕೆಲವೆಡೆ ಮತ್ತೆ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದ್ದು, ಇನ್ನೂ ಏನೆಲ್ಲಾ ಅನಾಹುತಗಳು ಸಂಭವಿಸಲಿವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮತ್ತೊಂದೆಡೆ ಈ ಬಾರಿ ನದಿ, ಕರೆ-ಕಟ್ಟೆಗಳು, ಜಲಾಶಯಗಳು ತುಂಬಿದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ.












Click it and Unblock the Notifications