Karnataka Major Reservoirs: KRS, ಘಟಪ್ರಭಾ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಸೆಪ್ಟೆಂಬರ್ 27ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಬಿರು ಬಿರುಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವೇ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ಒಳಹರಿವು ಇದೆ. ಹಾಗಾದ್ರೆ ಶುಕ್ರವಾರ (ಸೆಪ್ಟೆಂಬರ್ 27) ಕೆಆರ್ಎಸ್, ಆಲಮಟ್ಟಿ ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವು ಕಡೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪರಿಣಾಮ ಕೆಲವು ಜಲಾಶಯಗಳನ್ನ ಹೊರತುಪಡಿಸಿದರೆ, ಉಳಿದ ಬಹುತೇಕ ಡ್ಯಾಂಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗುತ್ತಲಿದೆ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 105.44 ಅಡಿ
* ಒಳಹರಿವು - 1,241 ಕ್ಯೂಸೆಕ್
* ಹೊರಹರಿವು - 2,356 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,268.98 ಅಡಿ
* ಒಳಹರಿವು - 2,450 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,624.53 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 9,054 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,795.55 ಅಡಿ
* ಒಳಹರಿವು - 3,703 ಕ್ಯೂಸೆಕ್
* ಹೊರಹರಿವು - 2,688 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 176 ಅಡಿ
* ಒಳಹರಿವು - 688 ಕ್ಯೂಸೆಕ್
* ಹೊರಹರಿವು - 4,010 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,850.67 ಅಡಿ
* ಒಳಹರಿವು - 1,626 ಕ್ಯೂಸೆಕ್
* ಹೊರಹರಿವು - 100 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,891.55 ಅಡಿ
* ಒಳಹರಿವು - 800 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 518.80 ಮೀಟರ್
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 12,001 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.70 ಅಡಿ
* ಒಳಹರಿವು - 190 ಕ್ಯೂಸೆಕ್
* ಹೊರಹರಿವು - 190 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,065.64 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್


Click it and Unblock the Notifications
