Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿ: ಸೆಪ್ಟೆಂಬರ್ 6ರಂದು ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ ಇಂದು (ಸೆಪ್ಟೆಂಬರ್ 6) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿರುವ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಈ ಹಿನ್ನೆಲೆ ನದಿತೀರದ ಜನರಿಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆಯೂ ಸೂಚಿಸಲಾಗಿದೆ.

ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.85 ಅಡಿ
* ಒಳಹರಿವು - 15,479 ಕ್ಯೂಸೆಕ್
* ಹೊರಹರಿವು - 16,065 ಕ್ಯೂಸೆಕ್
ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2283.89 ಅಡಿ
* ಒಳಹರಿವು - 15,551 ಕ್ಯೂಸೆಕ್
* ಹೊರಹರಿವು - 14,000 ಕ್ಯೂಸೆಕ್
ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1817.75 ಅಡಿ
* ಒಳಹರಿವು - 11,596 ಕ್ಯೂಸೆಕ್
* ಹೊರಹರಿವು 8,910 ಕ್ಯೂಸೆಕ್
ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.535 ಟಿಎಂಸಿ
* ಇಂದಿನ ನೀರಿನ ಮಟ್ಟ - 184.4 ಅಡಿ
* ಒಳಹರಿವು - 15,342 ಕ್ಯೂಸೆಕ್
* ಹೊರಹರಿವು - 14,139 ಕ್ಯೂಸೆಕ್
ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2858.48 ಅಡಿ
* ಒಳಹರಿವು - 4,678 ಕ್ಯೂಸೆಕ್
* ಹೊರಹರಿವು - 6,000 ಕ್ಯೂಸೆಕ್
ಈಗಾಗಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದ ಪರಿಣಾಮ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇನ್ನು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications