Karnataka Rains: ಸೆಪ್ಟಂಬರ್ 12ರಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್
Karnataka Weather Forecast: ಕರ್ನಾಟಕ ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಆರ್ಭಟಿಸಲಿದೆ. ಸೆಪ್ಟಂಬರ್ 11ರಿಂದ ನಿಧಾನವಾಗಿ ಒಂದೊಂದೇ ಜಿಲ್ಲೆಗಳಲ್ಲಿ ಸಕ್ರಿವಯಾಗುವ ಮಳೆಯು, ಅನೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದಲ್ಲಿ ಸುರಿಯಲಿದೆ. ಇಂದು ಎರಡು ಜಿಲ್ಲೆಗಳಲ್ಲಿ ಹಾಗೂ ನಾಳೆ ಗುರುವಾರ 7 ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, 'ಯೆಲ್ಲೋ ಅಲರ್ಟ್' ನೀಡಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಇಂದು ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಧಾರಾಕಾರ ಮಳೆ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಸೆಪ್ಟಂಬರ್ 11ರಂದು ಬೀದರ್, ಕಲಬುರಗಿ, ಯಾದಿಗಿರಿ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಉತ್ತಮ ಮಳೆ ಆಗಲಿದೆ.

ಶುಕ್ರವಾರದಿಂದ ಭಾರೀ ಮಳೆ ವಿಸ್ತರಣೆ
ಸೆಪ್ಟಂಬರ್ 12ರಿಂದ ಭಾರೀ ಮಳೆಯು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಣೆ ಆಗಲಿದೆ. ಆಗ ಮೇಲಿನ ಜಿಲ್ಲೆಗಳ ಜೊತೆಗೆ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಆಗಲಿದ್ದು, ಬೇರೆ ಬೇರೆ ದಿನಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಮಾಹಿತಿ ನೀಡಿದೆ.
ನೆನ್ನೆ ಬೆಳಗಾವಿ, ವಿಜಯಪುರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮಳೆ ಆಗಿದೆ. ಕರಾವಳಿ ಹಾಗೂ ಮಲೆನಾಡಿಗೆ ತಾತ್ಕಾಲಿಕವಾಗಿ ವಿರಾಮ ನೀಡಿರುವ ಮಳೆರಾಯ ಒಳನಾಡು ಪ್ರದೇಶಗಳಲ್ಲಿ ಅಬ್ಬರಿಸಲು ಸಜ್ಜಾಗಿದ್ದಾನೆ. ಬೆಂಗಳೂರು, ಕಲಬುರಗಿ, ಧಾರವಾಡ, ಚಿತ್ರದುರ್ಗದಲ್ಲಿ ಒಣಹವೆ ಮುಂದುವರಿದಿದೆ.
ರಾಜ್ಯದ ಗರಿಷ್ಠ ತಾಪಮಾನದ ಜಿಲ್ಲೆಗಳು
ಕಲಬುರಗಿಯಲ್ಲಿ 34.1 ಡಿಗ್ರಿ ಸೆಲ್ಸಿಯಸ್, ರಾಯಚೂರು 33.4 ಡಿಗ್ರಿ ಸೆಲ್ಸಿಯಸ್, ಕೊಪ್ಪಳ (ಗಂಗಾವತಿ) 33.1 ಡಿಗ್ರಿ ಸೆಲ್ಸಿಯಸ್, ಗದಗ 32.4 ಡಿಗ್ರಿ ಸೆಲ್ಸಿಯಸ್, ಧಾರವಾಡ 31 ಡಿಗ್ರಿ ಸೆಲ್ಸಿಯಸ್, ಕಾರವಾರ 31.8 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 32.5 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 32.7 ಡಿಗ್ರಿ ಸೆಲ್ಸಿಯಸ್, ಮಂಡ್ಯ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಹಾಸನ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಪುರ, ಬೆಂಗಳೂರು ವಿಮಾನ ನಿಲ್ದಾಣ, ಬೆಳಗಾವಿ ವಿಮಾನ ನಿಲ್ದಾಣಗಳಲ್ಲ ತಲಾ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡು ಬಂದಿದೆ. ರಾಜ್ಯಾದ್ಯಂತ ಬಿಸಲಿನ ಅಬ್ಬರ ಹೆಚ್ಚಾಗಿದೆ. ಇದಕ್ಕೆ ಈ ವಾರಾಂತ್ಯಕ್ಕೆ ಮಳೆ ತಂಪೆರೆಯುವ ಸಾಧ್ಯತೆ ಇದೆ.












Click it and Unblock the Notifications