ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ
ಬೆಂಗಳೂರು, ಫೆ.6: ಕರ್ನಾಟಕ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ 2012 ಮತ್ತು 2013ನೇ ಸಾಲಿನ ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗೆ ನಾಡಿನ ವಿವಿಧ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪುರಸ್ಕೃತರಿಗೆ 20 ಸಾವಿರ ರೂ ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆಬ್ರವರಿ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಂ ಎ ಪೊನ್ನಪ್ಪ ತಿಳಿಸಿದರು.
2012 ಸಾಲಿನ ಜೀವಮಾನದ ಸಾಧನೆಯನ್ನು ಪರಿಗಣಿಸಿ ಒಬ್ಬರಿಗೆ ವಿಶೇಷ ಪ್ರಶಸ್ತಿ ಹಾಗೂ 20 ಸಾಧಕರಿಗೆ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಈಗ 30ರ ಸಂಭ್ರ್ರಮ. ಈ ಸಂಭ್ರಮದ ಹಿನ್ನೆಲೆಯಲ್ಲಿ 2013ನೇ ಸಾಲಿಗೆ 30 ಪತ್ರಕರ್ತರಿಗೆ ಅಕಾಡೆಮಿ ಪ್ರಶಸ್ತಿ ಹಾಗೂ ಜೀವಮಾನದ ಸಾಧನೆಗಾಗಿ ಇಬ್ಬರನ್ನು ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು ಎಂದು ಪೊನ್ನಪ್ಪ ತಿಳಿಸಿದರು.

2013ನೇ ಸಾಲಿಗೆ ಮಣಿಪಾಲ ಮೀಡಿಯ ನೆಟ್ ವರ್ಕ್ ಮುಖ್ಯಸ್ಥರಾದ ಟಿ. ಸತೀಶ್. ಯು. ಪೈ ಅವರನ್ನು ವಾರ್ಷಿಕವಾಗಿ ನೀಡಲಾಗುವ ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಕಾಡೆಮಿಗೆ 30ರ ಸಂಭ್ರಮದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಪತ್ರಿಕೋದ್ಯಮ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರಾಧ್ಯಾಪಕರೊಬ್ಬರನ್ನು ಗೌರವಿಸಲು ನಿರ್ಧರಿಸಲಾಗಿದ್ದು ಅದರಂತೆ ಸಂವಹನ ತಜ್ಞರಾದ ಪ್ರೊ. ಎಚ್. ಎಸ್. ಈಶ್ವರ ಅವರನ್ನು ಜೀವಮಾನದ ಸಾಧನೆಗಾಗಿ ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಗಳ ಜೊತೆಗೆ ತಲಾ 10 ಸಾವಿರ ರೂ. ನಗದು ಬಹುಮಾನ ಒಳಗೊಂಡ 2012 ಮತ್ತು 13ನೇ ಸಾಲಿನ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ "ಆಂದೋಲನ ಪ್ರಶಸ್ತಿ", ‘ಸಾಮಾಜಿಕ ಸಮಸ್ಯೆ' ಲೇಖನಕ್ಕೆ ನೀಡುವ ‘ಅಭಿಮಾನಿ ಪ್ರಶಸ್ತಿ', ‘ಮಾನವೀಯ ಸಮಸ್ಯೆ' ಲೇಖನಕ್ಕೆ ನೀಡುವ "ಮೈಸೂರು ದಿಗಂತ" ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ನೆರವೇರಿಸಲು ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ವಾರ್ತಾ, ಹಜ್ ಹಾಗೂ ಮೂಲಭೂತ ಸೌಕರ್ಯ ಸಚಿವರಾದ ಆರ್. ರೋಷನ್ ಬೇಗ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಇತರ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಎಂ.ಎ. ಪೊನ್ನಪ್ಪ ತಿಳಿಸಿದ್ದಾರೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications