ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದಾ ಬಿಜೆಪಿ ಟೀಕಿಸುವ ಸಿದ್ದರಾಮಯ್ಯಗೆ ಶೆಟ್ಟರ್ ಎಸೆದ ಗುರುತರ ಚಾಲೆಂಜ್

|
Google Oneindia Kannada News

ಹುಬ್ಬಳ್ಳಿ, ಸೆ 2: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಮಾಜಿ ಸಿದ್ದರಾಮಯ್ಯನವರಿಗೆ, ಸಚಿವ ಜಗದೀಶ್ ಶೆಟ್ಟರ್ ಬುದ್ದಿವಾದದ ಜೊತೆಗೆ ಸವಾಲೊಂದನ್ನು ಹಾಕಿದ್ದಾರೆ.

' ಸದಾ ಬಿಜೆಪಿ ಟೀಕಿಸುತ್ತಿರುವ ಸಿದ್ದರಾಮಯ್ಯನವರು ಮೊದಲು ತಮ್ಮ ಪಕ್ಷದ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಮೊದಲು ಅರಿತುಕೊಳ್ಳಲಿ" ಎಂದು ಜಗದೀಶ್ ಶೆಟ್ಟರ್ ಬುದ್ದಿಮಾತನ್ನು ಹೇಳಿದ್ದಾರೆ.

ಜೊತೆಗೆ, " ಸಿದ್ದರಾಮಯ್ಯನವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಬಿಜೆಪಿಯನ್ನು ಟೀಕಿಸುವ ಮೊದಲು, ವಿರೋಧ ಪಕ್ಷದ ನಾಯಕನನ್ನು ಮೊದಲು ಆಯ್ಕೆಮಾಡಿಕೊಳ್ಳಿ" ಎಂದು ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ನನ್ನನ್ನು ಕೆಣಕಿದರೆ ಹುತ್ತದಲ್ಲಿರುವ ನಾಗರಹಾವನ್ನು ಕೆಣಕಿದಂತೆ, ಎಂಟಿಬಿನನ್ನನ್ನು ಕೆಣಕಿದರೆ ಹುತ್ತದಲ್ಲಿರುವ ನಾಗರಹಾವನ್ನು ಕೆಣಕಿದಂತೆ, ಎಂಟಿಬಿ

" ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡುವ ಸಿದ್ದರಾಮಯ್ಯನವರ ಮಾತಿಗೆ ಹೆಚ್ಚಿನ ಮಹತ್ವವನ್ನು ಕೊಡಬೇಕಾಗಿಲ್ಲ. ರಾಜ್ಯ ಕಾಂಗ್ರೆಸ್ಸಿನಲ್ಲಿ ಎಷ್ಟು ಬಣಗಳಿವೆ ಎನ್ನುವುದನ್ನು ಮೊದಲು ಸಿದ್ದರಾಮಯ್ಯ ಮೊದಲು ಲೆಕ್ಕಹಾಕಿಕೊಳ್ಳಲಿ" ಎಂದು ಶೆಟ್ಟರ್, ಸಿದ್ದರಾಮಯ್ಯನವರಿಗೆ ಸವಾಲನ್ನು ಎಸೆದಿದ್ದಾರೆ.

Karnataka Minister Jagadish Shettar Challenge To CLP Leaderr Siddaramaiah

" ರಾಜ್ಯ ಬಿಜೆಪಿ ಸರ್ಕಾರ 'ಆಪರೇಷನ್ ಕಮಲದ ಅನೈತಿಕ ಕೂಸು'. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು" ಎಂದು ಸಿದ್ದರಾಮಯ್ಯ ಟೀಕಿಸಿದ್ದರು.

ಎಂಟಿಬಿ ನಾಗರಾಜ್ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆಎಂಟಿಬಿ ನಾಗರಾಜ್ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

" ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

English summary
Karnataka Minister Jagadish Shettar Challenge To CLP Leaderr Siddaramaiah. Shettar said, first Congress should appoint Opposition Leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X