ಪುತ್ರಿಯ ಬಳಿಕ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ರಾಜಕೀಯಕ್ಕೆ ಎಂಟ್ರಿ
ಬೆಳಗಾವಿ, ಫೆಬ್ರವರಿ 08: ಕಾಂಗ್ರೆಸ್ ಪಾಳಯದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವೆ ಯಾವಾಗಲೂ ಮುಸುಕಿನ ಗುದ್ದಾಟ ನಡೆಯುತ್ತಿರುತ್ತದೆ. ಈಗಾಗಲೇ ಸತೀಶ್ ಜಾರಕಿಹೊಳಿ ಅವರು ಕೈ ನಾಯಕರ ವಿರೋಧದ ನಡುವೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಪುತ್ರಿಯನ್ನ ಕಣಕ್ಕಿಳಿಸುವ ಮೂಲಕ ಗೆಲುವು ಸಾಧಿಸಿದ್ದು
ಲೋಕಸಭೆ ಚುನಾವಣೆ ಮೂಲಕ ಮಗಳನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ. ಇದೀಗ ಪುತ್ರ ರಾಹುಲ್ ಜಾರಕಿಹೊಳಿ ಅವರನ್ನ ರಾಜಕೀಯದ ಅಖಾಡಕ್ಕೆ ಸೆಳೆಯಲು ಜಾರಕಿಹೊಳಿ ಕುಟುಂಬ ಸಜ್ಜಾಗಿದ್ದು, ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಫೇಸ್ ಬುಕ್ ನಲ್ಲಿ ಈ ಕುರಿತು ಪೋಸ್ಟ್ ಹಾಕಿಕೊಂಡಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನನ್ನನ್ನು ಪ್ರಚಂಡ ಮತಗಳಿಂದ ಆಯ್ಕೆ ಮಾಡಿದ ಎಲ್ಲ ಮತದಾರರಿಗೆ, ಹಾಗೂ ಪರೋಕ್ಷವಾಗಿ ಮತ್ತು ಅಪರೋಕ್ಷವಾಗಿ ನನ್ನ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಕಾಂಗ್ರೆಸ್‌ನ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಜೊತೆಯಾಗಿ ಕೆಲಸ ಮಾಡೋಣ. ನಿಮ್ಮ ಬೆಂಬಲ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ನಾವು ಒಟ್ಟಿಗೆ ಹೊಸ ಜಾಗೃತಿಯೊಂದಿಗೆ ಕಾರ್ಯನಿರ್ವಹಿಸೋಣ ಎಂದು ಹೇಳಿದ್ದಾರೆ.
ಇನ್ನೂ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೋಕಾಕ್ನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದೆ. ರಾಹುಲ್ ಜಾರಕಿಹೊಳಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ, ಸತೀಶ್ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ ಪರ ಘೋಷಣೆ ಮೊಳಗಿದೆ.
ಈಗಾಗಲೇ ಸತೀಶ್ ಜಾರಕಿಹೊಳಿ ಅವರ ಎಲ್ಲಾ ಸಹೋದರರು ರಾಜಕೀಯಕ್ಕೆ ಎಂಟ್ರಿಯಾಗಿದ್ದು, ಇದೀಗ ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪುತ್ರಿಯನ್ನ ಕಣಕ್ಕಿಳಿಸುವ ಮೂಲಕ ರಾಜಕೀಯಕ್ಕೆ ಕರೆತಂದಿದ್ದು, ಇದೀಗ ಸತೀಶ ಜಾರಕಿಹೊಳಿ ಅವರು ಪುತ್ರ ರಾಹುಲ್ ಜಾರಕಿಹೊಳಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ. ಈಗಾಗಲೇ ಮಗಳನ್ನ ಸಂಸದೆಯನ್ನಾಗಿ ಮಾಡಿರುವ ಸತೀಶ್ ಜಾರಕಿಹೊಳಿ ಅವರು ತಮ್ಮ ಪುತ್ರ ರಾಜಕೀಯ ಭವಿಷ್ಯ ರೂಪಿಸಲು ಮಾಸ್ಟರ್ಪ್ಲ್ಯಾನ್ ಮಾಡಿದ್ದಾರೆ. ಹೀಗಾಗ ಆರಂಭದಲ್ಲಿಯೇ ಮಗನಿಗೆ ಪಕ್ಷ ಸಂಘಟನೆಯ ಜವಾಬ್ದಾರಿಯನ್ನ ನೀಡಿದ್ದು, ಪಕ್ಷ ಸಂಘಟನೆಯ ಜೊತೆ ಜನರ ಮನ ಗೆಲ್ಲುವ ಅವಕಾಶವನ್ನ ಸತೀಶ್ ಜಾರಕಿಹೊಳಿ ಅವರು ಸೃಷ್ಟಿಸಿದ್ದಾರೆ.












Click it and Unblock the Notifications