Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆ ಸೇರಿದಂತೆ ಒಂಬತ್ತು ಹೊಸಬರಿಗೆ ಸ್ಥಾನ- ಯಾರು ತಿಳಿಯಿರಿ

ಬೆಂಗಳೂರು, ಮೇ 27: ಬೆಂಗಳೂರಿನ ರಾಜಭವನದಲ್ಲಿ 24 ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ನಡೆಯಲಿದೆ. ಈ ಮೂಲಕ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಎರಡನೇ ಹಾಗೂ ಅಂತಿಮ ಹಂತದ ಸಚಿವ ಸಂಪುಟ ವಿಸ್ತರಣೆಯನ್ನು ಮಾಡಿದೆ.

ಈಗ ಸಚಿವ ಸ್ಥಾನ ಪಡೆದಿರುವ 24 ಮಂದಿಯಲ್ಲಿ 23 ಜನರು ಶಾಸಕರಾಗಿದ್ದಾರೆ. ಎನ್.ಎಸ್. ಬೋಸರಾಜು ಅವರು ಕರ್ನಾಟಕ ವಿಧಾನಮಂಡಲದ ಎರಡೂ ಸದನಗಳ ಸದಸ್ಯರಲ್ಲ. ಇಂದು ಬೆಳಗ್ಗೆ 11.45ಕ್ಕೆ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಂಪುಟವು 34 ಸಚಿವರನ್ನು ಹೊಂದಿದಂತಾಗುತ್ತದೆ.

List Of 9 Debutant Ministers in Siddaramaiahs Cabinet Including a Women

ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಆಯ್ಕೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿರುವ ಏಕೈಕ ಮಹಿಳಾ ಶಾಸಕಿಯಾಗಿದ್ದಾರೆ.

ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಂದ ನೂತನ ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಿರಿಯ ನಾಯಕರಾದ ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಎನ್.ಚೆಲುವರಾಯಸ್ವಾಮಿ, ಕೆ.ವೆಂಕಟೇಶ್, ಎಚ್.ಸಿ. ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

List Of 9 Debutant Ministers in Siddaramaiahs Cabinet Including a Women

ಶಿವಾನಂದ ಪಾಟೀಲ್, ತಿಮ್ಮಾಪುರ ರಾಮಪ್ಪ ಬಾಳಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಶರಣಪ್ರಕಾಶ ರುದ್ರಪ್ಪ ಪಾಟೀಲ್, ಮಂಕಾಳ್ ವೈದ್ಯ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಮ್ ಖಾನ್, ಡಿ.ಸುಧಾಕರ್, ಸಂತೋಷ್ ಲಾಡ್‌, ಮಧು ಬಂಗಾರಪ್ಪ, ಸುರೇಶ, ಬೈ. ಎಂ.ಸಿ. ಸುಧಾಕರ್ ಮತ್ತು ಬಿ.ನಾಗೇಂದ್ರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎಐಸಿಸಿ ಕಾರ್ಯದರ್ಶಿ ಬೋಸರಾಜು ಅವರು ಎರಡು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಎಂಎಲ್‌ಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಅವರು ಪ್ರಸ್ತುತ ಎರಡೂ ಸದನಗಳ ಸದಸ್ಯರಲ್ಲ. ಸಿದ್ದರಾಮಯ್ಯನವರ ನಿಷ್ಠಾವಂತರು ಸಾಕಷ್ಟು ಸಂಖ್ಯೆಯಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ.

ಲಕ್ಷಿ ಹೆಬ್ಬಾಳ್ಕರ್, ವೆಂಕಟೇಶ್, ಬೈರತಿ ಸುರೇಶ್, ಮಧು ಬಂಗಾರಪ್ಪ, ಸುಧಾಕರ್, ಮಂಕಾಳ್ ವೈದ್ಯ, ರಾಜಣ್ಣ, ಬೋಸರಾಜು ಮತ್ತು ನಾಗೇಂದ್ರ ಅವರು ಪ್ರಥಮ ಬಾರಿಗೆ ಸಚಿವರಾಗುತ್ತಾರೆ.

List Of 9 Debutant Ministers in Siddaramaiahs Cabinet Including a Women

ಜಾತಿ ಸಂಯೋಜನೆ

34 ಸದಸ್ಯರ ಸಚಿವ ಸಂಪುಟದಲ್ಲಿ ಆರು ಒಕ್ಕಲಿಗರು, ಎಂಟು ವೀರಶೈವ-ಲಿಂಗಾಯತರು, ಆರು ಒಬಿಸಿಗಳು, ಆರು ಪರಿಶಿಷ್ಟ ಜಾತಿಗಳು, ಮೂರು ಪರಿಶಿಷ್ಟ ಪಂಗಡಗಳು, ಇಬ್ಬರು ಮುಸ್ಲಿಮರು, ಜೈನ, ಬ್ರಾಹ್ಮಣ ಮತ್ತು ಕ್ರಿಶ್ಚಿಯನ್ ಸಮುದಾಯದಿಂದ ತಲಾ ಒಬ್ಬರು ಇದ್ದಾರೆ.

ವೀರಶೈವ-ಲಿಂಗಾಯತರ ವಿವಿಧ ಪಂಗಡಗಳಿಗೆ ಸೇರಿದ ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿಭಾಗಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪಕ್ಷದ ಕೇಂದ್ರ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆಯ ನಂತರ, ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರುಗಳ ಬಗ್ಗೆ ಒಮ್ಮತಕ್ಕೆ ಬಂದರು. ಅವರು ದೆಹಲಿಯಲ್ಲಿ ಎಐಸಿಸಿ ಮುಖ್ಯಸ್ಥ ಎಂ. ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ತೀರ್ಮಾನಕ್ಕೆ ಬಂದರು.

ಕಳೆದ ಶನಿವಾರದಂದು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಎಂಟು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಯಾವುದೇ ಖಾತೆ ಹಂಚಿಕೆಯಾಗಿಲ್ಲ.

ತಮಗೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಕ್ಕೆ ಹಿರಿಯ ಮುಖಂಡ ಹಾಗೂ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಚುನಾವಣೆಗೆ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷಣ ಸವದಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿಲ್ಲ. ಪ್ರಮುಖ ನಾಯಕರಾದ ಟಿ.ಬಿ. ಜಯಚಂದ್ರ ಮತ್ತು ಆರ್.ವಿ. ದೇಶಪಾಂಡೆ ಅವರಿಗೂ ಸಚಿವ ಸ್ಥಾನ ನೀಡಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+