IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್‌ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್
ಬೆಂಗಳೂರಿನಲ್ಲಿ ಶುರುವಾಗುತ್ತಿರುವ ಐಪಿಎಲ್ ಪಂದ್ಯಗಳ ಉಚಿತ ಟಿಕೆಟ್‌ಗಾಗಿ ಶಾಸಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಉಂಟಾಗಿದ್ದ ಗೊಂದಲಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. ಶಾಸಕರ ಬೇಡಿಕೆಯಂತೆ ತಲಾ ನಾಲ್ಕು ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸದ್ಯದ ಮಟ್ಟಿಗೆ ಎಲ್ಲ ಶಾಸಕರು, ಸಚಿವರು ಹಾಗೂ ಸಂಸದರಿಗೆ ತಲಾ ಎರಡು ಟಿಕೆಟ್ ಸಿಗಲಿದೆ ಎಂದು ಸಿಹಿಸುದ್ದಿ ಕೊಟ್ಟಿದ್ದಾರೆ.
ಪ್ರತಿ ಶಾಸಕರು ಕೇಳುತ್ತಿರುವಂತೆ ತಲಾ ನಾಲ್ಕು ಟಿಕೆಟ್‌ಗಳನ್ನು ನೀಡಲು ಸಾಧ್ಯವಿಲ್ಲ. ಇದು ಪ್ರಾಯೋಗಿಕವಾಗಿ ಅಸಾಧ್ಯ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿಯಂತೆ ಪ್ರತಿ ಶಾಸಕರು, ಸಂಸದರು ಮತ್ತು ಸಚಿವರಿಗೆ ತಲಾ ಒಂದು ಸೀಟು (ಒಂದು ಟಿಕೆಟ್) ನೀಡಲಾಗುತ್ತಿತ್ತು. ಶಾಸಕರ ಕುಟುಂಬದ ಸದಸ್ಯರು ಜೊತೆಯಲ್ಲಿ ಹೋಗುವುದಾದರೆ ಕನಿಷ್ಠ ಎರಡು ಟಿಕೆಟ್ ನೀಡುವಂತೆ ನಾವು ಕೆಎಸ್‌ಸಿಎ (KSCA) ಸಂಸ್ಥೆಗೆ ಮನವಿ ಮಾಡಿದ್ದೇವೆ. ಹೀಗಾಗಿ, ನಾಳೆ ನಡೆಯಲಿರುವ ಮೊದಲ ಪಂದ್ಯಕ್ಕೆ ಶಾಸಕರಿಗೆ ತಲಾ ಎರಡು ಟಿಕೆಟ್‌ಗಳು ಸಿಗಲಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಹೆಚ್ಚಿನ ಟಿಕೆಟ್ ಬಗ್ಗೆ ಚರ್ಚೆ
ಮುಂದಿನ ಪಂದ್ಯಗಳ ಟಿಕೆಟ್ ಹಂಚಿಕೆಯ ಬಗ್ಗೆ ಆನಂತರ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜನಪ್ರತಿನಿಧಿಗಳು ಕ್ರಿಕೆಟ್ ಟಿಕೆಟ್‌ಗಾಗಿ ಲಾಬಿ ಮಾಡುತ್ತಿರುವುದು ಸಾರ್ವಜನಿಕರ ತೀವ್ರ ಟೀಕೆಗೆ ಗುರಿಯಾಗಿದೆ. ಇತ್ತ "ಶಾಸಕರಿಗೆ ಸೌಲಭ್ಯ ಕೇಳುವ ಹಕ್ಕಿದೆ" ಎಂದು ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದರೂ, ಸೋಷಿಯಲ್ ಮೀಡಿಯಾದಲ್ಲಿ 'ವಿಐಪಿ ಸಂಸ್ಕೃತಿ' ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ, ಶಾಸಕರ ಹಠಕ್ಕೆ ಮಣಿದಿರುವ ಸರ್ಕಾರ, ಸದ್ಯಕ್ಕೆ ತಲಾ ಎರಡು ಟಿಕೆಟ್ ಕೊಡಿಸಲು ಮುಂದಾಗಿದೆ.
ಜನಪ್ರತಿನಿಧಿಗಳು ಐಪಿಎಲ್ ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ 'ಉಚಿತ ವಿಐಪಿ ಟಿಕೆಟ್'ಗಾಗಿ ಪಟ್ಟು ಹಿಡಿದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಈ ಬೇಡಿಕೆ ಈಗ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಚರ್ಚೆಯ ವೇಳೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಕಾಶಪ್ಪನವರ್, ಪ್ರತಿ ಶಾಸಕರು ಮತ್ತು ಸಚಿವರಿಗೆ ತಲಾ 5 ಉಚಿತ ಐಪಿಎಲ್ ಟಿಕೆಟ್‌ಗಳನ್ನು ನೀಡಬೇಕು. ಶಾಸಕರಿಗಾಗಿಯೇ ಕ್ರೀಡಾಂಗಣದಲ್ಲಿ ಪ್ರತ್ಯೇಕ ಮತ್ತು ವಿಶೇಷ ಆಸನಗಳ ವ್ಯವಸ್ಥೆ ಮಾಡಬೇಕು. ನಾವು ಜನಪ್ರತಿನಿಧಿಗಳು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ನಮಗೆ ಸೂಕ್ತ ಗೌರವ ನೀಡಬೇಕು" ಎಂಬ ಬೇಡಿಕೆಗಳನ್ನು ಮುಂದಿಟ್ಟಿದ್ದರು.
ಶಾಸಕರ ಬೆಂಬಲಕ್ಕೆ ನಿಂತ ಡಿ.ಕೆ.ಶಿವಕುಮಾರ್
ಶಾಸಕರ ಈ ವಿಐಪಿ ಸಂಸ್ಕೃತಿಯ ಬೇಡಿಕೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ. "ಶಾಸಕರು ಸರ್ಕಾರದ ಒಂದು ಭಾಗವಾಗಿದ್ದಾರೆ, ಹೀಗಾಗಿ ಅವರಿಗೆ ಸೌಲಭ್ಯಗಳನ್ನು ಕೇಳುವ ಹಕ್ಕಿದೆ" ಎಂದು ಹೇಳುವ ಮೂಲಕ ಶಾಸಕರ ಬೇಡಿಕೆಗೆ ಸಾಥ್ ನೀಡಿದ್ದಾರೆ. ಅಲ್ಲದೆ, ಈ ಬೇಡಿಕೆಯನ್ನು ಟೀಕಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಸಾಮಾನ್ಯ ಜನರು ಸಾವಿರಾರು ರೂಪಾಯಿ ಖರ್ಚು ಮಾಡಿ, ಗಂಟೆಗಟ್ಟಲೆ ಬಿಸಿಲಿನಲ್ಲಿ ಕ್ಯೂ ನಿಂತು ಟಿಕೆಟ್ ಪಡೆಯುತ್ತಿದ್ದರೆ, ಜನಪ್ರತಿನಿಧಿಗಳು 'ಉಚಿತ' ಸೌಲಭ್ಯಕ್ಕಾಗಿ ಲಾಬಿ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯಕ್ಕೆ ಜನಪ್ರತಿನಿಧಿಗಳಿಗೆ ತಲಾ ಎರಡು ಟಿಕೆಟ್ ನೀಡುವಂತೆ ಕೆಎಸ್‌ಸಿಎಗೆ ಸೂಚಿಸಲಾಗಿದ್ದರೂ ಜನಪ್ರತಿನಿಧಿಗಳ ಈ 'ವಿಐಪಿ ಹಠ' ಮಾತ್ರ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಅಂತೂ ಪಂದ್ಯ ನೋಡಲು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಶಾಸಕರು ಸಕ್ಸಸ್ ಅಂತೂ ಆಗಿದ್ದಾರೆ.
-
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications