• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸುಪ್ರೀಂಕೋರ್ಟ್ ಆದೇಶ : ಮೈತ್ರಿ ಸರ್ಕಾರ, ಅತೃಪ್ತ ಶಾಸಕರು ಸೇಫ್

|

ಬೆಂಗಳೂರು, ಜುಲೈ 12 : ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶ ನೀಡಿದೆ. ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಇದರಿಂದಾಗಿ ಶಾಸಕರು, ಮೈತ್ರಿ ಸರ್ಕಾರ ಸೇಫ್ ಆಗಿದೆ.

ಶುಕ್ರವಾರ ಅತೃಪ್ತ ಶಾಸಕರು, ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಅವರ ಪೀಠದಲ್ಲಿ ನಡೆಯಿತು. ಜುಲೈ 16ರ ತನಕ ಯಥಾಸ್ಥಿತಿ ಕಾಪಾಡಬೇಕು ಎಂದು ಕೋರ್ಟ್ ಆದೇಶ ನೀಡಿತು.

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸ್ಪೀಕರ್ ರಮೇಶ್ ಕುಮಾರ್

ಶಾಸಕರ ರಾಜೀನಾಮೆ, ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಮಂಗಳವಾರದ ತನಕ ಯಾವುದೇ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ. ಮಂಗಳವಾರ ಪುನಃ ಅರ್ಜಿಯ ವಿಚಾರಣೆಯನ್ನು ನಡೆಸುವುದಾಗಿ ಸುಪ್ರೀಂಕೋರ್ಟ್‌ ತನ್ನ ಆದೇಶದಲ್ಲಿ ಹೇಳಿತು.

ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬ, ಸುಪ್ರೀಂನಲ್ಲಿ ವಿಚಾರಣೆ

ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ದೂರುಗಳ ಬಗ್ಗೆ ಮಂಗಳವಾರದ ತನಕ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಬಾರದು ಎಂದು ಸ್ಪೀಕರ್‌ಗೆ ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆ ವೇಳೆ ನಿರ್ದೇಶನ ನೀಡಿತು.

ಕರ್ನಾಟಕದ ರೆಬೆಲ್ ಶಾಸಕರಿಗೆ ಖಡಕ್ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಮೂರು ಕಡೆಯ ವಾದ ಆಲಿಸಿದ ನ್ಯಾಯಾಲಯ

ಮೂರು ಕಡೆಯ ವಾದ ಆಲಿಸಿದ ನ್ಯಾಯಾಲಯ

ಶುಕ್ರವಾರ ಸುಪ್ರೀಂಕೋರ್ಟ್‌ ಅರ್ಜಿಯ ವಿಚಾರಣೆ ವೇಳೆ ಅತೃಪ್ತ ಶಾಸಕರು, ಸ್ಪೀಕರ್ ರಮೇಶ್ ಕುಮಾರ್ ಪರ ವಕೀಲರು, ಮುಖ್ಯಮಂತ್ರಿಗಳ ಪರವಾದ ವಕೀಲರ ವಾದವನ್ನು ಆಲಿಸಿತು. ಎರಡು ಅರ್ಜಿಗಳ ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.

ರಾಜೀವ್ ಧವನ್ ವಾದ ಮಂಡನೆ

ರಾಜೀವ್ ಧವನ್ ವಾದ ಮಂಡನೆ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ವಾದ ಮಂಡನೆ ಮಾಡಿದ ರಾಜೀವ್ ಧವನ್ ಅವರು, 'ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಯಾವ ಆಧಾರದದಲ್ಲಿಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ರಾಜ್ಯಪಾಲರಿಗೆ ಯಾವುದೇ ಅಧಿಕಾರವಿಲ್ಲ. ಮೈತ್ರಿ ಸರ್ಕಾರಕ್ಕೆ ಬಹುಮತವಿದೆ' ಎಂದು ವಾದ ಮಂಡನೆ ಮಾಡಿದರು.

ಮಂಗಳವಾರಕ್ಕೆ ವಿಚಾರಣೆ ಮುಂದೂಡಿಕೆ

ಮಂಗಳವಾರಕ್ಕೆ ವಿಚಾರಣೆ ಮುಂದೂಡಿಕೆ

ಮೂರು ಕಡೆಯ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಅವರು, ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಲಾಗುತ್ತದೆ ಅಲ್ಲಿಯ ತನಕ ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶ ನೀಡಿದರು.

ಸ್ಪೀಕರ್ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ

ಸ್ಪೀಕರ್ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ

ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕರ ರಾಜೀನಾಮೆ, ಅನರ್ಹತೆ ಬಗ್ಗೆ ಯಾವುದೇ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

English summary
Supreme Court of India adjourned the hearing to July 16, 2019 petition of Karnataka MLA's resignation process.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X