ಶಾಸಕರಿಗೆ ಒಲಿದು ಬರಲಿದೆ ಲ್ಯಾಪ್‌ಟಾಪ್ ಭಾಗ್ಯ!
ಬೆಂಗಳೂರು, ಜ.22 : ಕರ್ನಾಟಕದ ಶಾಸಕರಿಗೆ ಸದ್ಯ ಲ್ಯಾಪ್‌ಟಾಪ್ ಭಾಗ್ಯ ಒದಗಿ ಬಂದಿದೆ. ಹೌದು ಪ್ರತಿ ಶಾಸಕರಿಗೆ ಲ್ಯಾಲ್ ಟಾಪ್ ಖರೀದಿಸಲು ಸರ್ಕಾರ ಅನುದಾನ ನೀಡಲು ಮುಂದಾಗಿದೆ. ಈ ಕುರಿತು ಸ್ಪೀಕರ್ ಕಾಗೋಡು ತಿಮ್ಮಪ್ಪ ಮಾಹಿತಿ ನೀಡಿದ್ದು, ಲ್ಯಾಪ್ ಟಾಪ್ ಖರೀದಿ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಕಾಗೋಡು ತಿಮ್ಮಪ್ಪ, ಸರ್ಕಾರದ ವತಿಯಿಂದ ಪ್ರತಿ ಶಾಸಕರಿಗೆ ಲ್ಯಾಪ್ ಟಾಪ್ ಖರೀದಿಸಲು 60,000ರೂ ನೀಡಲಾಗುವುದು ಎಂದು ಹೇಳಿದರು. ಇದಕ್ಕಾಗಿ ಸುಮಾರು 1.34 ಕೋಟಿ ವೆಚ್ಚವಾಗಲಿದ್ದು, ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರ ನೀಡಿದ ಹಣಕಾಸಿನ ನೆರವಿನಲ್ಲಿ ಶಾಸಕರು ತಮ್ಮಿಷ್ಟದ ಕಂಪನಿಯ ಲ್ಯಾಪ್ ಟಾಪ್ ಖರೀದಿಸಬಹುದು. ಲ್ಯಾಪ್ ಟಾಲ್ ಖರೀದಿಸಿದ ಶಾಸಕರು ಅದರ ಬಿಲ್ ಅನ್ನು ವಿಧಾನಸಭೆಯ ಮುಖ್ಯ ಕಾರ್ಯರ್ಶಿಅವರಿಗೆ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದರು. ಇಂದಿನ ತಂತ್ರಜ್ಞಾನದ ಯುಗದಲ್ಲಿ ಲ್ಯಾಪ್ ಟಾಪ್ ಶಾಸಕರಿಗೆ ಸಹಾಯಕವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.[ಶಾಸಕರಿಗೆ ಐಪ್ಯಾಡ್]
ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರಿಗೆ ಐಪಾಡ್ ನೀಡಲಾಗಿತ್ತು. ಆದರೆ, ಐಪಾಡ್ ಗಿಂತ ಲ್ಯಾಪ್ ಟಾಪ್ ಶಾಸಕರಿಗೆ ಹೆಚ್ಚು ನೆರವಾಗಲಿದೆ. ಶಾಸಕರು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಾರೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು. ಸರ್ಕಾರದಿಂದ ಕೇವಲ ಒಂದು ಬಾರಿ ಮಾತ್ರ ಖರೀದಿಗೆ ಅನುದಾನ ನೀಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಮಾರ್ಗಸೂಚಿ ಬಳಿಕ ಕ್ರಮ : ಶಾಸಕರ ವಿದೇಶ ಪ್ರವಾಸ ಸದ್ಯಕ್ಕೆ ನಿಂತಿದ್ದು, ಈ ಕುರಿತು ಸ್ಪಷ್ಟ ಮಾರ್ಗಸೂಚಿ ಸಿದ್ಧವಾದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಶಾಸಕರ ವಿದೇಶ ಪ್ರವಾಸ ಕುರಿತಂತೆ ಮಾರ್ಗಸೂಚಿ ಸಿದ್ಧಪಡಿಸಲು ವಿಧಾನಸಭೆ, ವಿಧಾನ ಪರಿಷತ್ ಕಾರ್ಯದರ್ಶಿಗಳ ನೇತೃತ್ವದ ಸಮಿತಿ ರಚಿಸಲಾಗಿದೆ. ಪ್ರವಾಸದಿಂದ ಅರ್ಥಪೂರ್ಣ ಕೆಲಸವಾಗಬೇಕು ಎಂಬ ನಿಟ್ಟಿನಲ್ಲಿ ಮಾರ್ಗಸೂಚಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಶಾಸಕರ ಅಭಿಪ್ರಾಯ ಪಡೆದು ಸಮಿತಿ ಫೆಬ್ರವರಿ 20ರೊಳಗೆ ಸಮಿತಿ ವರದಿ ನೀಡಲಿದೆ ಎಂದರು.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications