Karnataka MLC Election: ವಿಧಾನ ಪರಿಷತ್ ಚುನಾವಣಾ ದಿನಾಂಕ ಪ್ರಕಟ; 4 ಕ್ಷೇತ್ರಗಳಲ್ಲಿ ಅಕ್ಟೋಬರ್ 23ಕ್ಕೆ ಮತದಾನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದೆ. ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಪ್ರಸ್ತುತ ಈ ನಾಲ್ಕು ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿರುವ ವಿಧಾನ ಪರಿಷತ್ ಸದಸ್ಯರ ಅವಧಿ ನವೆಂಬರ್ 2026ರಲ್ಲಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ತೆರವಾಗಲಿರುವ ಸ್ಥಾನಗಳಿಗೆ ಹೊಸ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ಘೋಷಿಸಲಾಗಿದೆ.

Karnataka MLC Election Legislative Council Elections 2026 Voting for 4 Seats on October 23 Result Oct 27

Karnataka MLC Election: ಯಾವ ಕ್ಷೇತ್ರಗಳಿಗೆ ಚುನಾವಣೆ?

ಕರ್ನಾಟಕದ ಆಗ್ನೇಯ ಪದವೀಧರ, ಪಶ್ಚಿಮ ಪದವೀಧರ, ಈಶಾನ್ಯ ಶಿಕ್ಷಕರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಪ್ರಸ್ತುತ ಈ ಕ್ಷೇತ್ರಗಳ ಸದಸ್ಯರಾಗಿ ಚಿದಾನಂದ ಎಂ. ಗೌಡ, ಎಸ್.ವಿ. ಸಂಕನೂರ, ಶಶೀಲ್ ಜಿ. ನಮೋಶಿ ಮತ್ತು ಪುಟ್ಟಣ್ಣ ಇದ್ದಾರೆ. ಇವರ ಅವಧಿ ನವೆಂಬರ್ 2026ರಲ್ಲಿ ಪೂರ್ಣಗೊಳ್ಳಲಿದೆ.

Karnataka MLC Election: ಚುನಾವಣಾ ವೇಳಾಪಟ್ಟಿ

ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29ರಂದು ಅಧಿಸೂಚನೆ ಹೊರಬೀಳಲಿದೆ. ಅಕ್ಟೋಬರ್ 6ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 9ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ಅವಕಾಶ ಇರಲಿದೆ.

ಅಕ್ಟೋಬರ್ 23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಅಕ್ಟೋಬರ್ 27ರಂದು ನಡೆಯಲಿದ್ದು, ಚುನಾವಣಾ ಪ್ರಕ್ರಿಯೆ ಅಕ್ಟೋಬರ್ 31ರೊಳಗೆ ಪೂರ್ಣಗೊಳ್ಳಲಿದೆ.

ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿ

ಚುನಾವಣೆ ಘೋಷಣೆಯಾಗಿರುವ ಸಂಬಂಧಪಟ್ಟ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳು ಅನ್ವಯವಾಗಲಿವೆ.‌

ನಾಲ್ಕು ರಾಜ್ಯಗಳಲ್ಲಿ ವಿಧಾನ ಪರಿಷತ್ ಚುನಾವಣೆ

ಕರ್ನಾಟಕದ ನಾಲ್ಕು ಸ್ಥಾನಗಳ ಜೊತೆಗೆ ಬಿಹಾರದಲ್ಲಿ 8, ಮಹಾರಾಷ್ಟ್ರದಲ್ಲಿ 5 ಹಾಗೂ ಉತ್ತರ ಪ್ರದೇಶದಲ್ಲಿ 11 ವಿಧಾನ ಪರಿಷತ್ ಸ್ಥಾನಗಳಿಗೂ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ನಾಲ್ಕು ರಾಜ್ಯಗಳ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದೆ.

ಕರ್ನಾಟಕದ ನಾಲ್ಕು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ವಿವಿಧ ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಆಯ್ಕೆ, ನಾಮಪತ್ರ ಸಲ್ಲಿಕೆ ಹಾಗೂ ಪ್ರಚಾರ ಚಟುವಟಿಕೆಗಳು ವೇಗ ಪಡೆಯುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+