Karnataka MLC Election Results 2021 LIVE: ಬಿಜೆಪಿ 12, ಕಾಂಗ್ರೆಸ್ 11ರಲ್ಲಿ ಗೆಲುವು
ಬೆಂಗಳೂರು, ಡಿಸೆಂಬರ್ 14; ಕರ್ನಾಟಕ ವಿಧಾನ ಪರಿಷತ್25 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಮಂಗಳವಾರ ಮತ ಎಣಿಕೆ ನಡೆಯುತ್ತಿದ್ದು, ಸಂಜೆಯ ವೇಳೆಗೆ ಫಲಿತಾಂಶದ ನಿಖರವಾದ ಚಿತ್ರಣ ದೊರೆಯುವ ನಿರೀಕ್ಷೆ ಇದೆ.
ಬೆಳಗ್ಗೆ 8 ಗಂಟೆಗೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಲಿದೆ. ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾವಣೆ ಮಾಡಲಾಗಿದೆ. ಅಲ್ಲದೇ ಪ್ರಥಮ ಮತ್ತು ದ್ವಿತೀಯ ಆದ್ಯತೆ ಮತಗಳ ಎಣಿಕೆ ನಡೆಯಬೇಕಿರುವುದರಿಂದ ಸಂಜೆ ವೇಳೆಗೆ ಫಲಿತಾಂಶ ಸಿಗಲಿದೆ.
ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಜೆಡಿಎಸ್‌ನ 6 ಅಭ್ಯರ್ಥಿಗಳು ಮತ್ತು 33 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರು. ಸ್ಥಳೀಯ ಸಂಸ್ಥೆಗಳ ಸದಸ್ಯರು ಶುಕ್ರವಾರ ಉತ್ಸಾಹದಿಂದಲೇ ಮತದಾನ ಮಾಡಿದ್ದರು.

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಲು ಗುರುತಿನ ಚೀಟಿ ಕಡ್ಡಾಯವಾಗಿದೆ. ಕೋವಿಡ್ ನಿಯಮ ಪಾಲನೆ ಮಾಡಬೇಕಿದೆ. ಮತ ಎಣಿಕೆ ಕೇಂದ್ರದ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Recommended Video
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆಯ ಸುದ್ದಿ, ಫೋಟೋ, ವಿಡಿಯೋ ಈ ಪುಟದಲ್ಲಿ ಸಿಗಲಿದೆ. ಪರಿಷತ್ ಚುನಾವಣೆ ಮತ ಎಣಿಕೆ ಕ್ಷಣ-ಕ್ಷಣದ ಮಾಹಿತಿಗಾಗಿ ಈ ಪುಟವನ್ನು ನೋಡಿ, ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ.....












Click it and Unblock the Notifications