5 ಕಾರಣಗಳಿಗೆ ಮಂಕಾಗುತ್ತಿದೆ ಕರ್ನಾಟಕದ ಮಾಡೆಲ್: ಏನದು ನೋಡಿ
Karnataka Model study: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕ ಮಾದರಿ (ಕರ್ನಾಟಕ ಮಾಡೆಲ್) ಬಹುದೊಡ್ಡ ಸುದ್ದಿ ಮಾಡಿತ್ತು. ಇದಕ್ಕೆ ಜನ ಮನ್ನಣೆಯೂ ಸಿಕ್ಕಿತ್ತು. ಕರ್ನಾಟಕದ ಮಾದರಿಯಿಂದಲೇ ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೂ ಸಹಾಯವಾಗಿತ್ತು. ಪಂಚ ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿ ಮಾಡಿದ್ದ ಸರ್ಕಾರವು, ರಾಜ್ಯದ ಜನರಿಂದ ಮೆಚ್ಚುಗೆ ಗಳಿಸಿತ್ತು. ಆದರೆ, ಅದೇ ಕರ್ನಾಟಕದ ಮಾಡೆಲ್ ಮಂಕಾಗುತ್ತಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ಅದಕ್ಕೆ 5 ವಿಷಯಗಳೇ ಕಾರಣ. ಏನದು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಮಾಡೆಲ್‌ನಿಂದಲೇ ಕಾಂಗ್ರೆಸ್ ಪುಟಿದೇಳುವ ಕನಸು ಕಂಡಿತ್ತು. ಪ್ರಾರಂಭದ ದಿನಗಳಲ್ಲಿ ಕರ್ನಾಟಕದ ಮಾಡೆಲ್ ದೇಶದಾದ್ಯಂತ ಹೆಚ್ಚು ಮನ್ನಣೆಯನ್ನು ಗಳಿಸಿತ್ತು. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಮೂರು ತಿಂಗಳ ಒಳಗಾಗಿ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಿತ್ತು. ಹಲವು ಯೋಜನೆಗಳನ್ನು ಕಾಲಮಿತಿಯಲ್ಲಿ ಜಾರಿ ಮಾಡಲಾಗಿತ್ತು.

ಸಿ.ಎಂ ಬದಲಾವಣೆಯ ಕೂಗು
ಕರ್ನಾಟಕದ ಮಾಡೆಲ್ ಮಂಕಾಗುವುದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಪ್ರಮುಖವಾದದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಅವಿರತ ಶ್ರಮ ವಹಿಸಿದ್ದರು. ಆದರೆ, ಇದೀಗ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಮೇಲೂ ಆರೋಪ ಕೇಳಿ ಬಂದ ಮೇಲೆ ಸಿ.ಎಂ ಬದಲಾವಣೆಯ ಕೂಗು ಹೆಚ್ಚಾಗಿದೆ. ಇದಕ್ಕೆ ವಿರೋಧ ಪಕ್ಷಗಳಿಗಿಂತ ಆಡಳಿತ ಪಕ್ಷದಲ್ಲಿನ ನಾಯಕರು ಹಾಗೂ ಸಚಿವರೇ ಭಿನ್ನ ಹೇಳಿಕೆಗಳನ್ನು ಕೊಡುತ್ತಿದ್ದು, ಕರ್ನಾಟಕದ ಮಾಡೆಲ್ ಪರಿಕಲ್ಪನೆಗೆ ಪೆಟ್ಟು ಬಿದಿದ್ದೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಣ ರಾಜಕೀಯ ಹಾಗೂ ಒಳಜಗಳವೂ ಕಾರಣ.
ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಗೊಂದಲ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದರೂ, ಜಾರಿ ವೇಳೆ ಹಾಗೂ ಈಗಲೂ ಗ್ಯಾರಂಟಿ ಯೋಜನೆಗಳಲ್ಲಿರುವ ಗೊಂದಲಗಳಿಂದ ಸರ್ಕಾರದ ಯೋಜನೆ ಹಾಗೂ ಮಾಡೆಲ್ ಕರ್ನಾಟಕಕ್ಕೆ ಹಿನ್ನಡೆಯಾದಂತಾಗಿದೆ. ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚು ಟೀಕೆಗೆ ಒಳಪಟ್ಟಿದ್ದು, ಗೃಹಲಕ್ಷ್ಮೀ ಯೋಜನೆ. ಇಂದಿಗೂ ಗೃಹಲಕ್ಷ್ಮೀಯ ಎರಡು ಕಂತಿನ ಹಣ ಬಾಕಿ ಇದೆ. ಅಲ್ಲದೇ ಗೃಹ ಲಕ್ಷ್ಮೀ ಯೋಜನೆಯಲ್ಲಿ ಪದೇ ಪದೇ ತಾಂತ್ರಿಕ ಸಮಸ್ಯೆ ಆಗುತ್ತಿರುವುದು ವರದಿಯಾಗುತ್ತಿದೆ. ಆದರೆ, ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಮುತುವರ್ಜಿ ವಹಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ವಿವಿಧ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಆಗಾಗ ಸಣ್ಣ ಪುಟ್ಟ ಗೊಂದಲಗಳು ಸೃಷ್ಟಿಯಾಗುವುದು ಇದೆ. ಆದರೆ, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಈ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ಕಾಣಿಸಬೇಕಿದೆ. ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಮಾಡೆಲ್‌ಗೆ ಮೆರಗು ಬಂದಿದ್ದರೂ, ಅದರ ಜಾರಿ ಹಾಗೂ ಗೊಂದಲದಿಂದ ಕರ್ನಾಟಕ ಮಾಡೆಲ್‌ಗೆ ಹಿನ್ನಡೆ ಉಂಟಾಗಿರುವುದಂತೂ ಸುಳ್ಳಲ್ಲ.
ಭ್ರಷ್ಟಾಚಾರ, ಹಗರಣಗಳ ಆರೋಪ
ಭ್ರಷ್ಟಾಚಾರ ಹಾಗೂ ಹಗರಣಗಳ ಆರೋಪ, ಸಚಿವ ರಾಜೀನಾಮೆಯಿಂದ ಕರ್ನಾಟಕದ ಮಾಡೆಲ್ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಾಣುವಂತೆ ಕುಸಿಯಲು ಪ್ರಾರಂಭಿಸಿತು. ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ ಪ್ರಕರಣಗಳಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಪಾತ್ರ ತುಂಬಾ ದೊಡ್ಡದು. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂಪಾಯಿ ಹಣ ಸರ್ಕಾರ ಖಾತೆಯಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿರುವುದು ವರದಿಯಾಗಿತ್ತು. ಅಲ್ಲದೇ ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ಬಿ ನಾಗೇಂದ್ರ ಶಾಮೀಲಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಅದರ ಬೆನ್ನಲ್ಲೇ ಬಿ ನಾಗೇಂದ್ರ ರಾಜೀನಾಮೆ ನೀಡಿದ್ದರು. ಇದು ಸರ್ಕಾರಕ್ಕೆ ತೀವ್ರ ಮುಜುಗರವನ್ನೂ ಉಂಟು ಮಾಡಿತ್ತು. ಪ್ರಕರಣದಲ್ಲಿ ಆರೋಪ ಎದುರಿಸಿದ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಿದರು. ಈ ಮೂಲಕ ರಾಜ್ಯ ಕಾಂಗ್ರೆಸ್‌ನ ಮೊದಲ ವಿಕೆಟ್ ಪತನವಾಗುವುದರೊಂದಿಗೆ ಸರ್ಕಾರದ ಮಾಡೆಲ್‌ಗೆ ಹಿನ್ನೆಡೆ ಉಂಟಾಯಿತು.

ಜಂಟಿ ವಿರೋಧ ಪಕ್ಷಗಳ ಹೋರಾಟ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಜೆಪಿ ಹೀನಾಯವಾಗಿ ಸೋಲು ಅನುಭವಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ - ಜೆಡಿಎಸ್ ಪಕ್ಷಗಳು ಒಂದಾದವು. ಚುನಾವಣಾ ಪೂರ್ವ ಮೈತ್ರಿಯಿಂದಾಗಿ ಕಾಂಗ್ರೆಸ್‌ಗೆ ಭಾರೀ ಹೊಡೆತ ಬಿತ್ತು. ಅಲ್ಲದೇ ಸರ್ಕಾರದ ತಪ್ಪುಗಳನ್ನು ರಾಜ್ಯದ ವಿರೋಧ ಪಕ್ಷಗಳು ಸಮರ್ಥವಾಗಿ ಬಳಸಿಕೊಂಡವು. ಅಲ್ಲದೇ ಹೋರಾಟಗಳನ್ನೂ ಸಹ ರೂಪಿಸಿದವು. ವಿರೋಧ ಪಕ್ಷದ ನಾಯಕರು ಸರಣಿ ಹೇಳಿಕೆಗಳನ್ನು ನೀಡಲು, ಟ್ವೀಟ್ ಮಾಡಲು ಪ್ರಾರಂಭಿಸಿದರು. ಇದೆಲ್ಲದರ ಪರಿಣಾಮ ಸರ್ಕಾರದ ಸಣ್ಣ ತಪ್ಪು ಹೆಜ್ಜೆಗಳು ಸಹ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಲು ಪ್ರಾರಂಭಿಸಿದವು.
ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ
ಕಾಂಗ್ರೆಸ್‌ನ ಕರ್ನಾಟಕ ಮಾಡೆಲ್‌ಗೆ ಮೊದಲ ಹಿನ್ನೆಡೆಯಾಗಿದ್ದು. ಕರ್ನಾಟಕದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಪ್ರಮಾಣದಲ್ಲಿ ಸ್ಥಾನಗಳನ್ನು ಗೆಲ್ಲದಿದ್ದಾಗ. ರಾಜ್ಯ ಪ್ರಭಾವಿ ನಾಯಕ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಅವರು ಚುನಾವಣೆಯಲ್ಲಿ ಸೋಲು ಅನುಭವಿಸಿದ್ದು. 2024ನೇ ಸಾಲಿನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 10ಕ್ಕಿಂತ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇದು ಸಾಧ್ಯವಾಗಲಿಲ್ಲ. ಕಾಂಗ್ರೆಸ್ 9 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತು. ಅಲ್ಲದೇ ಉಪ ಮುಖ್ಯಮಂತ್ರಿ ಅವರ ಸಹೋದರರೇ ಸೋಲು ಅನುಭವಿಸುವ ಮೂಲಕ ಸರ್ಕಾರಕ್ಕೆ ಮುಖಭಂಗವಾಗಿತ್ತು. ಈ ಎಲ್ಲಾ ಕಾರಣಗಳಿಂದ ಕರ್ನಾಟಕದ ಮಾಡೆಲ್‌ಗೆ ಮಂಕುಬಡಿದಂತಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications