ಕರ್ನಾಟಕ ಮುಂಗಾರು: ಜೂನ್ 17ರವರೆಗೂ 7 ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 17ರವರೆಗೂ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಜೂ.1ರಿಂದ ಮೀನುಗಾರಿಕೆ ಸಂಪೂರ್ಣ ಬಂದ್ ಆಗಿರುವುದರಿಂದ ಯಾಂತ್ರೀಕೃತ ಬೋಟ್‌ಗಳು ಕಡಲಿಗೆ ಇಳಿದಿಲ್ಲ. ಧಾರವಾಡ, ಹಾವೇರಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದ್ದು, ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು, ರೈತರು ಖುಷಿಯಾಗಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಆಗುಂಬೆಯಲ್ಲಿ 18 ಸೆಂ.ಮೀ, ಮಂಕಿಯಲ್ಲಿ 16 ಸೆಂ.ಮೀ ಮಳೆಯಾಗಿದೆ, ಗೋಕರ್ಣ, ಹೊನ್ನಾವರ, ಸುಬ್ರಹ್ಮಣ್ಯ, ಸಿದ್ದಾಪುರ, ಭಟ್ಕಳ, ಭಾಗಮಂಡಲ, ಕಾರವಾರ, ಬೆಳ್ತಂಗಡಿ, ಕದ್ರ, ಕೋಟ, ಕಾರ್ಕಳ, ಕೊಲ್ಲೂರು, ಶಿರಾಲಿ, ಮೂಡುಬಿದಿರೆ, ಜಯಪುರ, ಶೃಂಗೇರಿಯಲ್ಲಿ ಮಳೆಯಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತಮುಂಗಾರು ಚುರುಕುಗೊಂಡಿದೆ ಹೆಚ್ಚಿನ ಮಳೆಯಾಗುತ್ತಿದೆ.
Recommended Video

24 ಗಂಟೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಗಾಳಿಯು 45-55 ಕೆಎಂಪಿಎಚ್ ವೇಗದಲ್ಲಿ ಬೀಸುತ್ತಿದೆ.












Click it and Unblock the Notifications