ಕರ್ನಾಟಕ ಮುಂಗಾರು 2021: ರಾಜ್ಯದ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು, ಜೂನ್ 15: ರಾಜ್ಯದ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜೂನ್ 15 ಮತ್ತು 16 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, 18 ಹಾಗೂ 18 ರಂದು ಆರೆಂಜ್ ಅಲರ್ಟ್ ಹಾಗೂ 19ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 ಬೆಂಗಳೂರಿನಲ್ಲಿ ಮಳೆ

ಬೆಂಗಳೂರಿನಲ್ಲಿ ಮಳೆ

ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆಯಾಗಲಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ವಾಯುಭಾರ ಕುಸಿತ

ವಾಯುಭಾರ ಕುಸಿತ

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರ್ನಾಟಕದ ಕರಾವಳಿ ಪ್ರದೇಶ ಸಮೀಪಿಸಿದ್ದು, ಇದರ ಪರಿಣಾಮ ಕರಾವಳಿ ಪ್ರದೇಶಗಳಲ್ಲಿಇಂದಿನಿಂದ 18ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ. ಭಾರಿ ಗಾಳಿ ಬೀಸಲಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

 ಎಲ್ಲೆಲ್ಲಿ ಮಳೆಯಾಗಲಿದೆ

ಎಲ್ಲೆಲ್ಲಿ ಮಳೆಯಾಗಲಿದೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಇಂದಿನಿಂದ ಜೂನ್ 17ರವರೆಗೆ ವ್ಯಾಪಕ ಮಳೆಯಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಪಣಂಬೂರು, ಭಾಗಮಂಡಲ, ಆಗುಂಬೆ, ಸುಬ್ರಹ್ಮಣ್ಯ, ಕಾರ್ಕಳ, ಔರಾದ್, ಸಿದ್ದಾಪುರ, ಕುಂದಾಪುರ, ಉಪ್ಪಿನಂಗಡಿ, ಮೂಡುಬಿದಿರೆ, ಜಯಪುರ, ಕೊಟ್ಟಿಗೆಹಾರ, ಶೃಂಗೇರಿ, ಕದ್ರ, ಚಿಂಚೋಳಿ, ಕಾರವಾರ, ಬೀದರ್, ಯಲ್ಲಾಪುರ, ಹಾರಂಗಿ, ತರೀಕೆರೆ, ಸಾಗರ, ಕೊಪ್ಪಳ, ಭದ್ರಾವತಿ, ಹೊಸಕೋಟೆಯಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+