ಮುಂಗಾರು: ಜೂನ್ 14ರಂದು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು, ಜೂನ್ 09: ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿದೆ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಜೂ.14ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಜೂನ್ 10 ರಿಂದ 14 ರವರೆಗೆ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಜೂನ್ 10 ಹಾಗೂ 11 ರಂದು ಗುಡುಗುಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆ ಮೋಡ ಕವಿದ ವಾತಾವರಣವಿರಲಿದೆ.

ಉತ್ತರ ಒಳನಾಡಿನಲ್ಲಿ ಜೂನ್ 10 ರಂದು ಕೆಲವೆಡೆ ಮಾತ್ರ ಸಾಧಾರಣ ಮಳೆ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 10 ರಿಂದ 14ರ ವರೆಗೆ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದೆ.

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಗರಿಷ್ಠ ಉಷ್ಣಾಂಶ 32 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬುಧವಾರದವರೆಗೂ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎನ್ನಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

 ಜೂನ್ 5ಕ್ಕೆ ಕರ್ನಾಟಕ ಪ್ರವೇಶಿಸಿತ್ತು

ಜೂನ್ 5ಕ್ಕೆ ಕರ್ನಾಟಕ ಪ್ರವೇಶಿಸಿತ್ತು

ಜೂನ್ 3ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 5ರಂದು ಕರ್ನಾಟಕ ಪ್ರವೇಶಿಸಿದ್ದು, ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿಗೆ ಆಗಮಿಸಿದೆ. ಹೀಗಾಗಿ ಜೂನ್ 9ರವರೆಗೂ ಅನೇಕ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸೂಚನೆ ನೀಡಲಾಗಿದೆ.

 ಕರಾವಳಿ ಜಿಲ್ಲೆಗಳಲ್ಲಿ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

 ಯಾವ್ಯಾವ ಪ್ರದೇಶದಲ್ಲಿ ಮಳೆಯಾಗಿದೆ?

ಯಾವ್ಯಾವ ಪ್ರದೇಶದಲ್ಲಿ ಮಳೆಯಾಗಿದೆ?

ಆಗುಂಬೆ, ಕಾರವಾರ, ಸುಬ್ರಹ್ಮಣ್ಯ, ಕದ್ರ, ಮಂಕಿ, ಶಿರಾಲಿ, ಕುಂದಾಪುರ, ಭಟ್ಕಳ, ಯಲ್ಲಾಪುರ, ಮುಲ್ಕಿ, ಹುಂಚದಕಟ್ಟೆ, ಶೃಂಗೇರಿ, ಕಿರವತ್ತಿಯಲ್ಲಿ ಮಳೆಯಾಗಿದೆ.

Recommended Video

    LIONS ತಂಡದ ನಿಸ್ವಾರ್ಥ ಸೇವೆ! | Covid Warriors | Oneindia Kannada
     ಬೆಂಗಳೂರು ಹವಾಮಾನ ವರದಿ

    ಬೆಂಗಳೂರು ಹವಾಮಾನ ವರದಿ

    ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಎಚ್‌ಎಎಲ್‌ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+