Karnataka Monsoon Rain: ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಾನ್ಸೂನ್ ಮಳೆ, ಎಷ್ಟು ದಿನ ಅಲರ್ಟ್?
ಕರ್ನಾಟಕದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿದ್ದರೂ ಮಳೆ ಮುಂದುವರಿದಿದೆ. ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಲಿದೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲೆ, ಅಥಣಿ ಬೆಳಗಾವಿ ಜಿಲ್ಲೆ, ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಗದಗ ಜಿಲ್ಲೆಯ ಬೆಳ್ಳಟ್ಟಿ ಭಾಗದಲ್ಲಿ ಮಳೆಯಾಗಿದೆ. ಕರ್ನಾಟಕದ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಜೂನ್ 9ರಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ತುಂತುರು ಮಳೆಯಾಗಲಿದೆ, ಇನ್ನುಳಿದ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಲಿದೆ, ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ಪಕ್ಕದ ಮರಾಠವಾಡ ಮತ್ತು ತೆಲಂಗಾಣದ ಮೇಲೆ ಈಗ ವಾಯು ಚಂಡಮಾರುತದ ಪರಿಚಲನೆಯು ಉತ್ತರ ಒಳನಾಡು ಕರ್ನಾಟಕ ಮತ್ತು ನೆರೆಹೊರೆಗಳ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿದೆ.

ನೈರುತ್ಯ ಮುಂಗಾರು ಮುಂಬೈ, ಅಹಲ್ಯಾನಗರ, ಆದಿಲಾಬಾದ್, ಭವಾನಿಪಟ್ಣ, ಪುರಿ, ಸ್ಯಾಂಡ್‌ಹೆಡ್ ದ್ವೀಪ, ಬಾಲೂರ್‌ಘಾಟ್ ಮೂಲಕ ಹಾದುಹೋಗಲಿದೆ. ಮುಂಗಾರು ಉತ್ತರ ಮಿತಿಯು ದಕ್ಷಿಣ ಮಧ್ಯ ಮಹಾರಾಷ್ಟ್ರದಿಂದ ಕರಾವಳಿ ಆಂಧ್ರಪ್ರದೇಶದವರೆಗೆ ಉತ್ತರ ಒಳನಾಡು, ಕರ್ನಾಟಕ ಮತ್ತು ತೆಲಂಗಾಣ ಮೂಲಕ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಒಂದು ಟ್ರಫ್ ಇದೆ ಎಂದು ಹೇಳಿದೆ.
ಎಲ್ಲೆಲ್ಲಿ ಮಳೆ ಅಲರ್ಟ್?
ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರಿನ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ, ಹಗುರದಿಂದ ಸಾಧಾರಣ ಮಳೆ, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಳುವ ಸಾಧ್ಯತೆ ಇದೆ.
ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ, ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಒಣ ವಾತಾವರಣ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications