Karnataka Monsoon: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್‌ 27 & 28ರಂದು ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ಜೂನ್‌, 27: ಈಗಾಗಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂಗಾರು ಚುರುಕು ಪಡೆದಿದೆ. ಹಾಗೆಯೇ ಸೋಮವಾರ (ಜೂನ್‌ 27) ಹಲವೆಡೆ ಭಾರೀ ಮಳೆಯಾಗಿದೆ. ಮಂಗಳವಾರ, ಬುಧವಾರ ಕೂಡ ಕೆಲವು ಭಾಗಗಳಲ್ಲಿ ಮಾತ್ರ ಗುಡುಗು ಸಹಿತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಪ್ರದೇಶಗಳಲ್ಲಿ ಮಳೆ ಆರ್ಭಟ ಹೆಚ್ಚಿರಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆದಿತ್ತು. ಇನ್ನು ಸಂಜೆ 6 ಗಂಟೆ ನಂತರ ನಗರದಲ್ಲಿ ಮೋಡ ಕವಿದ ವಾತಾವರಣ ಇತ್ತು. ಆದರೂ ಕೂಡ ಮಳೆ ಇಲ್ಲದಂತಾಗಿದೆ. ಹಾಗೆಯೆ ಮಂಗಳವಾರ ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆಗೆ ನಗರದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Monsoon: Heavy rainfall forecast in many districts of state on June 27 and 28

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಮತ್ತು ನಾಳೆ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಯೆಲ್ಲೋ ಅಲರ್ಟ್​ ಅನ್ನು ಸಹ ಘೋಷಣೆ ಮಾಡಲಾಗಿದೆ.

ಇನ್ನು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬಹುತೇಕ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುತ್ತಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ನಿನ್ನೆ ಕರಾವಳಿ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆ ಬಿದ್ದಿದೆ. ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 14 ಸೆಂ.ಮೀ., ಮಂಕಿಯಲ್ಲಿ 13 ಸೆಂ.ಮೀ. ಮಳೆ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೇ ಕಾರ್ಕಳ, ಗೇರುಸೊಪ್ಪ, ಅಂಕೋಲ ತಲಾ 7 ಸೆಂ.ಮೀ., ಉಡುಪಿ, ಕುಮಟಾ, ಕ್ಯಾಸಲ್ ರಾಕ್, ಕಾರವಾರ, ಗೋಕರ್ಣ, ಬೇಲಿಕೇರಿ, ಮೂಲ್ಕಿ, ಮಂಗಳೂರು, ಪಣಂಬೂರ, ಕೋಟ ತಲಾ 5 ಸೆಂ.ಮೀ., ಸಿದ್ದಾಪುರ 4 ಸೆಂ.ಮೀ., ಶಿರಾಲಿ, ಲೋಂಡಾ, ದೇವಗುರ್ಗ, ಲಿಂಗನಮಕ್ಕಿಯಲ್ಲಿ ತಲಾ 3 ಸೆಂ.ಮೀ., ಧರ್ಮಸ್ಥಳ, ಚಿತ್ತಾಪುರ, ಇಳಕಲ್, ಕಲಘಟಗಿ, ಹುಣಸೂರು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಶೃಂಗೇರಿ, ಕೊಪ್ಪ, ಮಾಗಡಿಯಲ್ಲಿ ತಲಾ 2 ಸೆಂ.ಮೀ. ಮಳೆ ಬಿದ್ದಿದೆ ಎಂದು ತಿಳಿದುಬಂದಿದೆ.

ಅಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್‌ 27, 28ರಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ಕಿ.ಮೀ.ನಿಂದ 55 ಕಿ.ಮೀ. ಬೀಸುವ ಸಂಭವವಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.

ಮತ್ತೊಂದೆಡೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ನಗರದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹಾಗೆಯೇ ಇಲ್ಲಿ ಗರಿಷ್ಠ ಉಷ್ಣಾಂಶ 29 ಸೆಲ್ಸಿಯಸ್‌, ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾದ್ಯತೆಯಿದೆ ಎಂದು ತಿಳಿಸಿದೆ.

ಒಟ್ಟಿನಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂಗಾರು ಚುರುಕು ಪಡೆದಿದೆ. ಮತ್ತೆ ಹಲವೆಡೆ ಮಳೆಗಾಗಿ ಅನ್ನದಾತ ಪರಿತಪಿಸುವಂತಾಗಿದೆ. ಮುಂಗಾರು ನಂಬಿ ಬೇಸಿಗೆ ಬೆಳೆಗಳನ್ನು ಬೆಳೆದ ರೈತರಂತೂ ಕಂಗಾಲಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+