Karnataka Monsoon: ರಾಜ್ಯದ ಈ ಭಾಗಗಳಲ್ಲಿ ಒಂದು ವಾರ ಮಳೆ ಮುನ್ಸೂಚನೆ
Karnataka Monsoon Rains: ರಾಜ್ಯದಲ್ಲಿ ಮುಂಗಾರು ಆರ್ಭಟವೇ ಇಲ್ಲದಂತಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾರಣವೇ ಮುಂದುವರೆದಿದೆ. ಕೆಲವೆಡೆ ಮಾತ್ರ ವರುಣನ ಆರ್ಭಟ ಮುಂದುವರೆದಿದೆ. ಈ ನಡುವೆ ಇದೀಗ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ದೀರ್ಘಕಾಲದ ತೀವ್ರ ಬೇಸಿಗೆಯ ಬಳಿಕ ಮಳೆಗಾಗಿ ಕಾಯುತ್ತಿದ್ದ ಜನರಿಗೆ ನೆಮ್ಮದಿ ಸುದ್ದಿಯಿಂದು ಇದೆ. ಕರ್ನಾಟಕದಾದ್ಯಂತ ಮುಂಗಾರು ಮಾರುತಗಳು ಚುರುಕುಗೊಂಡಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಹಲವು ದಿನಗಳವರೆಗೆ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಎಲ್ಲೆಲ್ಲಿ ಮಳೆ?
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ ಮತ್ತು ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಬಳ್ಳಾರಿ, ಮಂಡ್ಯ, ಮೈಸೂರು ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಲ್ಲಿ ಮಳೆಯಾಗಲಿದೆ ಈ ಭಾಗಗಳಲ್ಲಿ ಮಳೆಯ ಸಮಯದಲ್ಲಿ ಗಂಟೆಗೆ ಗಾಳಿಯು ಸುಮಾರು 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇದೇ ವೇಳೆ ಹಗುರದಿಂದ ಮಧ್ಯಮ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಜೂನ್ 20 ಮತ್ತು 21ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಈ ಭಾಗಗಳ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಹವಾಮಾನ ವರದಿಯ ಪ್ರಮುಖ ಅಂಶಗಳು
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗಲಿದ್ದು, ಜೂನ್ 23ರಂದು ಕರಾವಳಿಯುದ್ದಕ್ಕೂ ಮಳೆಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಲಿದೆ. ಜೂನ್ 18ರಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಕ್ರಿಯೆ ಚುರುಕಾಗಲಿದೆ. ಮೈಸೂರು, ಹಾಸನ, ಮಂಡ್ಯ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಧಾರವಾಡ, ಹಾವೇರಿ, ಗದಗ, ರಾಯಚೂರು ಮತ್ತು ಬೆಳಗಾವಿಯಲ್ಲಿ ಗುಡುಗು, ಮಿಂಚು ಸಹಿತ ಮಳಡ ಆರ್ಭಟ ಇರಲಿದೆ. ಈ ವೇಳೆ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 50 ಕಿಲೋ ಮೀಟರ್ ವೇಗದದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಇಂದು (ಜೂನ್ 18) ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32°C ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಲಿಯಸ್ ದಾಖಲಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಜೂನ್ 24 ರಿಂದ 26ರವರೆಗಿನ ದಿನಗಳಲ್ಲಿ ರಾಜ್ಯದ ಒಟ್ಟಾರೆ ಹವಾಮಾನ ಪರಿಸ್ಥಿತಿಯಲ್ಲಿ ಯಾವುದೇ ದಿಢೀರ್ ಬದಲಾವಣೆಗಳು ಕಂಡುಬರುವುದಿಲ್ಲ ಅಂತಲೂ ತಿಳಿಸಿದೆ.












Click it and Unblock the Notifications