Karnataka Monsoon Rain: ರಾಜ್ಯದಲ್ಲಿ ಆಗಸ್ಟ್‌ 6ರ ವರೆಗೆ ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆ

Karnataka Monsoon Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದು ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 2) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಒಂದು ವಾರದದಿಂದ ನಗರದ ಹಲವೆಡೆ ಜಿನುಗು ಮಳೆಯಾಗಿದೆ. ಇನ್ನು ಇಂದಿನಿಂದ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ.

Karnataka Monsoon Heavy Rainfall Forecast in These Districts of State Until August 6

ಅದರಲ್ಲೀ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್‌ 6ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉಳಿದಂತೆ ದಕ್ಷಿಣ ಒಳನಾರು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇನ್ನೂ ಕೆಲವೆಡೆ ಮೋಡ ಕವಿದ ವಾತಾವರಣ ಇದ್ದರೂ ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮತ್ತು ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲು ಆಗುವ ನಿರೀಕ್ಷೆಯಿದೆ. ಇನ್ನು ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಗಲೇ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದು ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದು ದೊಡ್ಡ ಅವಾಂತರಗಳೇ ಸೃಷ್ಟಿಯಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ನೋಡೋದಾದ್ರೆ, ಪ್ರಮುಖ ಜಲಾಶಯಗಳಲ್ಲಿ ಕೆಲವು ತುಂಬಿದ್ದು, ಇನ್ನೂ ಕೆಲವು ಭರ್ತಿಯಾಗುವ ಹಂತದಲ್ಲಿವೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಕೆಲವೆಡೆ ಬಿಟ್ಟುಬಿಡದೇ ಮಳೆರಾಯನ ಆರ್ಭಟ ಮುಂದುವರೆಸಿದ್ದಾನೆ.

ಈಗಾಗಲೇ ಭಾರೀ ಮಳೆಯದಂತಹ ವೇಳೆ ಹಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಈ ರಜೆಗಳನ್ನು ಸರಿದೂಗಿಸುವ ಕಾರ್ಯಗಳು ನಡೆಯುತ್ತಿವೆ. ಇನ್ನೂ ಇದೀಗ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಹಿನ್ನೆಲೆ ಹಲವೆಡೆ ಶಾಲೆಗಳಿಗೆ ರಜೆ ಘೋಸಿಸುವ ಸಾಧ್ಯತೆಯಿದೆ. ಒಂದು ವೇಳೆ ಹೀಗಾದರೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ರಜೆ ನೀಡಿ ಮತ್ತೆ ಇದನ್ನು ಸರಿದೂಗಿಸುವ ಮಹತ್ವದ ಕಾರ್ಯಕ್ಕೂ ಶಿಕ್ಷಕರು ಯೋಜನೆ ರೂಪಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+