Karnataka Monsoon Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕಂಡುಕೇಳರಿಯದ ಮಳೆ ಸುರಿಯುವ ಮುನ್ಸೂಚನೆ

Karnataka Monsoon Rain: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಈ ನಡುವೆಯೇ ಕೆಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 9) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದ್ದು, ನಗರದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ. ಈಗಾಗಲೇ ನಗರದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆರಾಯ ಆರ್ಭಟ ಮುಂದುವರೆಸಿದ್ದಾನೆ. ಅಲ್ಲದೆ, ಆಗಸ್ಟ್ 9 ರಿಂದ 13 ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Monsoon Rains Heavy rain forecast for the next 5 days in these districts of state

ಭಾರೀ ಮಳೆಯಿಂದಾಗಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿ ಜನಜೀವನ ಅಸ್ತವ್ಯಸ್ಥವಾಗಿದೆ. ಹಾಗೆಯೇ ಇದೀಗ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ಹವಾಮಾನ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲೊ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಆರೆಂಟ್‌, ಯೆಲ್ಲೋ ಅಲರ್ಟ್‌ ಘೋಷಣೆ: ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದರೆ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ದಾವಣಗೆರೆ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ರಣ ಮುಂದುವರೆದಿದೆ. ತಾಪಮಾನದ ವಿಚಾರಕ್ಕೆ ಬಂದರೆ ಬೆಂಗಳೂರು ನಗರದಲ್ಲಿ ಶುಕ್ರವಾರ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾದರೆ, ಕನಿಷ್ಠ 20.5 ಡಿಗ್ರಿ ಸೆಲ್ಸಿಯಸ್ ದಾಖಲಾದ ಬಗ್ಗೆ ವರದಿಯಾಗಿದೆ. ಇನ್ನೂ ನಿನ್ನೆ ಭಾರೀ ಮಳೆ ಸುರಿದ ಪರಿಣಾಮ ಹಲವು ಜಿಲ್ಲೆಗಳಲ್ಲಿ ದೊಡ್ಡ ಅವಾಂತರಗಳು ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಹಾಗೆಯೇ ಮತ್ತೆ ಮುಂಗಾರು ಚುರುಕು ಪಡೆದಿರುವ ಹಿನ್ನೆಲೆ ಮುಂದಿನ ಹಲವು ದಿನಗಳ ಕಾಲ ರಾಜ್ಯದಲ್ಲಿ ವರುಣ ಕಾಡಲಿದ್ದಾನೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+