Karnataka Monsoon Rains: ಮುಂದಿನ ಎರಡು ದಿನ ಗುಡುಗು ಸಹಿತ ರಣಾರ್ಭಟ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್
Karnataka Monsoon Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಚುರುಕು ಪಡೆದಿದ್ದು, ಹಲವೆಡೆ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನು ಮುಂದಿನ ಎರಡು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾದರೆ ಎಲ್ಲೆಲ್ಲಿ ಅಬ್ಬರದ ಮಳೆಯಾಗಲಿದ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು ಮತ್ತು ನಾಳೆ (ಜೂನ್ 8 & 9) ಭಾರೀ ಮಳೆ ಹಿನ್ನೆಲೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತುಬ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೊಂದೆಡೆ ಮೇ 9ರಂದು ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಜೂನ್ 10ರವರೆಗೂ ಬೆಂಗಳೂರು, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Red Alert 🚨⚠️🟥
— Karnataka Weather (@Bnglrweatherman) June 8, 2024
IMD issues Red Alert for Extremely Heavy Rains & strong winds over the Coastal Karnataka districts of Uttara Kannada & Udupi today & Orange Alert for Very Heavy Rains over Dakshina Kannada district today#KarnatakaRains pic.twitter.com/FQwRSiL0JB
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಗೋಕರ್ಣದಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆ ಸಂಗಮ ನಾಲೆಯ ಮೂಲಕ ಸಮುದ್ರ ಸೇರುವ ಮಳೆ ನೀರು ಮಹಾಬಲೇಶ್ವರ ಮಂದಿರದ ಸೋಮಸೂತ್ರದಿಂದ ಗರ್ಭ ಗುಡಿಗೆ ನುಗ್ಗಿದೆ. ಪರಿಣಾಮ ನಿನ್ನೆ (ಜೂನ್ 08) ರಾತ್ರಿ ಭಕ್ತರು ತೊಂದರೆ ಅನುಭವಿಸಿದ ಘಣಟ ನಡೆದಿದೆ.












Click it and Unblock the Notifications