Karnataka Weather: ಮತ್ತೆ ಚುರುಕಾದ ಮುಂಗಾರು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಕೆಲವೆಡೆ ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗಬಹುದು.

ಇಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಸಿಡಿಲು ಸಹಿತ ಮಳೆಯೊಂದಿಗೆ ಗಂಟೆಗೆ ಸುಮಾರು 30ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಮೇಲ್ಮೈ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Monsoon Update Heavy Rain Thunderstorms Likely Yellow Alert Issued for 5 Districts

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೊಪ್ಪಳ, ಬಾಗಲಕೋಟೆ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ದಿನವಿಡೀ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ನಗರದ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ.

ಕರಾವಳಿ ಭಾಗದಲ್ಲೂ ಮಳೆ ಚುರುಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದ ಬಲವಾದ ಸಮುದ್ರ ಗಾಳಿ ಬೀಸಬಹುದು. ಉಡುಪಿಯಲ್ಲಿ ಮಳೆ ಚುರುಕುಗೊಂಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಸಿಡಿಲು ಹಾಗೂ ಗಂಟೆಗೆ 30ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಮಳೆಯ ಆರ್ಭಟ ಸಾಧ್ಯತೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ತಂಪು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ವಿವಿಧೆಡೆ ಗಾಳಿ ಸಹಿತ ಸಾಧಾರಣದಿಂದ ಉತ್ತಮ ಮಳೆಯಾಗಬಹುದು. ಹಾಸನದಲ್ಲೂ ತಂಪಾದ ವಾತಾವರಣದೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ಅವಧಿಯಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳುವ ಸಾಧ್ಯತೆಯಿರುವುದರಿಂದ, ಜನರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+