Karnataka Rains: ಮತ್ತೆ ವರುಣನ ಆಗಮನ; ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆ
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಶುರುವಾಗಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ನವೆಂಬರ್ 26ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಹಗುರ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 27 ಮತ್ತು 28ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಒಣಹವೆ ಇರಲಿದ್ದು ಕೆಲವು ಕಡೆ ಮಂಜಿನ ವಾತಾವರಣ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಉಷ್ಣಾಂಶದಲ್ಲಿ ಭಾರಿ ಪ್ರಮಾಣದ ಇಳಿಕೆ ಆಗುತ್ತಿದೆ. ಕರ್ನಾಟಕದ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 28ರವರೆಗೂ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ನವೆಂಬರ್ 23ರಿಂದ ನವೆಂಬರ್ 28ರವರೆಗೂ ಒಣಹವೆ ಮುಂದುವರಿಯಲಿದೆ. ಇನ್ನೂ ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಒಣಹವೆ ಇರಲಿದೆ.












Click it and Unblock the Notifications