Karnataka Rains: ಮತ್ತೆ ವರುಣನ ಆಗಮನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು, ಡಿಸೆಂಬರ್ 06: ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಶುರುವಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಆದರೆ, ಇನ್ನೂ ಒಂದು ವಾರಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಸೇರಿದಂತೆ ನೆರೆಹೊರೆಯ ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರದಿಂದಾಗಿ ಜನತೆ ರೋಸಿ ಹೋಗಿದ್ರು. ಇದೀಗ ಫೆಂಗಲ್ ಚಂಡಮಾರುತದ ಅಬ್ಬರ ತಗ್ಗಿದರೂ ಅದರ ಎಫೆಕ್ಟ್ ಇನ್ನೂ ಕಡಿಮೆಯಾಗುತ್ತಿಲ್ಲ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಲೂ ಕೂಡ ಮಳೆ ಯಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಡಿಸೆಂಬರ್ 06 ರಿಂದ ಡಿಸೆಂಬರ್ 14 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾಗಲಿದ್ದು, ಡಿಸೆಂಬರ್ 06 ರಿಂದ 12ರವರೆಗೆ ಒಣ ಹವೆಯಿರುವ ಸಾಧ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,ಸಂಜೆ ಮೋಡ ಕವಿದ ವಾತಾವರಣವಿರಲಿದೆ. ಇನ್ನು ಹವಾಮಾನ ಇಲಾಖೆ ಪ್ರಕಾರ ರಾಜ್ಯದ ಉತ್ತರ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,ಸಂಜೆ ಮೋಡ ಕವಿದ ವಾತಾವರಣವಿರಲಿದೆ. ಇನ್ನು ಹವಾಮಾನ ಇಲಾಖೆ ಪ್ರಕಾರ ರಾಜ್ಯದ ಉತ್ತರ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಚಂಡಮಾರುತದ ಅಬ್ಬರ ತಗ್ಗಿದ ಹಿನ್ನಲೆ ಮಳೆಯೂ ತಗ್ಗಲಿದೆ ಎಂದು ಭಾವಿಸಲಾಗಿತ್ತು, ಆದರೆ ಇನ್ನೂ ಡಿಸೆಂಬರ್ 12 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications