Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ

ಬೆಂಗಳೂರು, ಸೆಪ್ಟೆಂಬರ್‌ 26: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಈ ವರ್ಷ ಜೋರಾಗಿತ್ತು. ಸೆಪ್ಟೆಂಬರ್‌ ಮೊದಲ ಮೂರು ವಾರ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ಮಳೆರಾಯನ ಅಬ್ಬರ ಆರಂಭಿಸಿದ್ದಾನೆ.

ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಯಿತು ಎನ್ನುವಾಗ ಕರ್ನಾಟಕದ ಹಲವೆಡೆ ಮತ್ತೆ ಅಬ್ಬರ ಹೆಚ್ಚಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka more then 10 districts will receive heavy rainfall

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಬಾಗಲಕೋಟೆ, ಕಲಬುರಗಿಯಲ್ಲಿ 2-3 ದಿನಗಳಿಂದ ಭಾರೀ ಮಳೆಯಾಗುತ್ತಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್‌, ಕಲಬುರಗಿ, ಯಾದಗರಿ ಜಿಲ್ಲೆಗೆ ಆರೆಂಜ್‌, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು. ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಳೆದ ಎರಡು ದಿನಗಳಿಂದ ನೈರುತ್ಯ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆಯಾಗುತ್ತಿದೆ. ವಿಜಯಪುರ, ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ಆಲಮಟ್ಟಿ, ಅಥಣಿಯಲ್ಲಿ ಭಾರಿ ಮಳೆಯಾಗಿದೆ. ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+