ಜಯಾ ಅಕ್ರಮ ಆಸ್ತಿ ಕೇಸ್, ಸುಪ್ರೀಂಗೆ ಮೇಲ್ಮನವಿ
ಬೆಂಗಳೂರು, ಜೂ. 23 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.
ಬುಧವಾರ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ಗೆ ಕರ್ನಾಟಕ ಸರ್ಕಾರ ಸಲ್ಲಿಕೆ ಮಾಡಿದ್ದು, ಜುಲೈ ಮೊದಲನೇ ವಾರದಲ್ಲಿ ಮೂವರು ನ್ಯಾಯಮೂರ್ತಿಗಳ ಪೀಠದ ಮುಂದೆ ಮೇಲ್ಮನವಿ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. [ಜಯಾ ಪ್ರಕರಣ: ಸರ್ಕಾರದಿಂದ 4 ಸಾವಿರ ಪುಟಗಳ ಅಪೀಲ್]

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಮತ್ತು ಇತರ ಮೂವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕರ್ನಾಟಕ ಸರ್ಕಾರ ಮೇಲ್ಮನವಿಯಲ್ಲಿ ಪ್ರಶ್ನಿಸಿದೆ. ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅವಕಾಶ ನೀಡಬಾರದು ಎಂದು ಕರ್ನಾಟಕ ಮನವಿ ಮಾಡಿದೆ. [ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!]
ಅರ್ಜಿಯಲ್ಲೇನಿದೆ? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತೀರ್ಪು ನೀಡುವಾಗ ಹೈಕೋರ್ಟ್ ಎಲ್ಲಾ ಅಂಶಗಳನ್ನು ಪರಿಗಣಿಸಿಲ್ಲ. ಖುಲಾಸೆಗೊಂಡ ನಂತರ ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಸರ್ಕಾರ ಹೇಳಿದೆ. [ಜಯಲಲಿತಾ ಘೋಷಣೆ ಮಾಡಿದ ಆಸ್ತಿ ಎಷ್ಟು ಗೊತ್ತಾ?]
ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವಾಗ ಜಯಲಲಿತಾ ಅವರ ಆಸ್ತಿಯ ಲೆಕ್ಕಾಚಾರದಲ್ಲಿ ತಪ್ಪು ಮಾಡಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ಸರ್ಕಾರ ಪ್ರಸ್ತಾಪಿಸಿದೆ. ಪ್ರಕರಣದಲ್ಲಿ ಕರ್ನಾಟಕವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ ಎಂದು ಅರ್ಜಿಯಲ್ಲಿ ಕರ್ನಾಟಕ ತಿಳಿಸಿದೆ.
ಸುಪ್ರೀಂಕೋರ್ಟ್‌ಗೆ ಈಗ ರಜೆ ಇದ್ದು ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಜುಲೈ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಮೂವರು ನ್ಯಾಯಮೂರ್ತಿಗಳ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ 2015ರ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications