ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಧ್ಯಮ ವಿವಾದ: ಪ್ರತ್ಯೇಕ ಕಾನೂನು ರಚನೆ

By Ashwath
|
Google Oneindia Kannada News

ಬೆಂಗಳೂರು, ಮೇ.10: ಸುಪ್ರೀಂ ತೀರ್ಪಿ‌ನಿಂದಾಗಿ ಕನ್ನಡ ಭಾಷೆಯ ಮೇಲೆ ಆಗಬಹುದಾದ ಪರಿಣಾಮ ತಪ್ಪಿಸಲು ಸರ್ಕಾರ ಕಾನೂನು ರೂಪಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಕಾನೂನು ತಜ್ಞರಿಂದ ಉತ್ತರ ಪಡೆಯಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೇ.9ರಂದು ಆಯೋಜಿಸಿದ ಸಾಹಿತಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ತಜ್ಞರ ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಮಾತೃಭಾಷೆ ಶಿಕ್ಷಣ ಕಡ್ಡಾಯಕ್ಕೆ ಸಂಬಂಧಿಸಿದಂತೆ ಸಂವಿಧಾನವನ್ನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.[ಸುಪ್ರೀಂ ತೀರ್ಪಿನಲ್ಲಿ ಏನಿದೆ]

ಸುಪ್ರೀಂಕೋರ್ಟ್ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಸಂಬಂಧಿಸಿದಂತೆ ನೀಡಿರುವ ತೀರ್ಪಿ‌ನಲ್ಲಿ ಸಾಕಷ್ಟು ವಿರೋಧಾಭಾಸಗಳಿವೆ. ಹಿಂದೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿ‌ಗೂ ಈಗ ನೀಡಿರುವ ತೀರ್ಪಿ‌ ವಿರೋಧವಿದೆ.ಹೀಗಾಗಿ ಮರು ಪರಿಶೀಲನಾ ಅರ್ಜಿ‌ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.[ಸುಪ್ರೀಂ ತೀರ್ಪು ಸ್ವಾಗತಿಸಿದ ಕುಸ್ಮಾ]

Chief minister Siddaramaiah

ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಬಹುತೇಕ ಮಂದಿ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಒಳಿತು ಎನ್ನುವ ಸಲಹೆ ನೀಡಿದರು.[ಸುಪ್ರೀಂತೀರ್ಪು ಯಾರು, ಏನು ಹೇಳಿದರು?]

ಜ್ಞಾನಪೀಠ ಪುರಸ್ಕೃತರಾದ ಡಾ.ಯು.ಆರ್‌. ಅನಂತಮೂರ್ತಿ, ಡಾ.ಗಿರೀಶ್‌ ಕಾರ್ನಾಡ್‌, ಡಾ.ಚಂದ್ರಶೇಖರ ಕಂಬಾರ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪುಂಡಲೀಕ ಹಾಲಂಬಿ,ನಿವೃತ್ತ ನ್ಯಾಯಮೂರ್ತಿ ರಾಮಾಜೋಯಿಸ್‌, ಹಿರಿಯ ಹೋರಾಟಗಾರ ಪಾಟೀಲ ಪುಟ್ಟಪ್ಪ, ಸಾಹಿತಿಗಳಾದ ಪ್ರೊ.ಕೆ.ಎಸ್‌. ನಿಸಾರ್‌ ಅಹಮದ್‌, ಬರಗೂರು ರಾಮಚಂದ್ರಪ್ಪ, ಸಾ.ಶಿ.ಮರುಳಯ್ಯ ಸೇರಿದಂತೆ ಹಲವಾರು ಸಾಹಿತಿಗಳು, ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

English summary
Chief minister Siddaramaiah announced besides a review petition against the Supreme Court's order on medium of instruction, the Karnataka government plans to enact a new act making Kannada the mandatory medium of instruction in primary schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X