Get Updates
Get notified of breaking news, exclusive insights, and must-see stories!

ಬೊಮ್ಮಾಯಿ ಸಾಧನೆಗೆ ಮೆಚ್ಚುಗೆ ಸೂಚಿಸಿದ ಅರುಣ್ ಸಿಂಗ್!

ಬೆಂಗಳೂರು, ಸೆಪ್ಟೆಂಬರ್ 07; ಕರ್ನಾಟಕದ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಮೆರೆದಿದೆ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು.

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆಳ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಬೆಳಗಾವಿಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಐತಿಹಾಸಿಕ ಸಾಧನೆ ಮಾಡಿದೆ. ಮುಖ್ಯಮಂತ್ರಿಗಳ ಬದಲಾವಣೆ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದು ಹೈಕಮಾಂಡ್ ನಾಯಕರು ಸಹ ನಿಟ್ಟುಸಿರು ಬಿಟ್ಟಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಆದರೆ ಯಾವುದೇ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರ ಫಲಿತಾಂಶ ಬಂದಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಳಿಕ ನಡೆದ ಮೊದಲ ಚುನಾವಣೆ ಬಗ್ಗೆ ಹೈಕಮಾಂಡ್ ನಾಯಕರಿಗೂ ಕುತೂಹಲವಿತ್ತು. ಪಕ್ಷದ ಸಾಧನೆಗೆ ವರಿಷ್ಠರು ಸಮಾಧಾನಗೊಂಡಿದ್ದು, ರಾಜ್ಯದ ನಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅದರಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಎಲ್ಲರೂ ಅಭಿನಂದಿಸುತ್ತಿದ್ದಾರೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕನ್ನಡದಲ್ಲಿ ಅವರು ಟ್ವೀಟ್ ಮಾಡಿದ್ದು, 'ಇನ್ನು ಮುಂದೆಯೂ ಅನೇಕ ಇಂತಹ ಸಾಧನೆಗಳಿಗೆ ಶ್ರೀ ಬೊಮ್ಮಾಯಿ ಅವರು ಸಾಕ್ಷಿಯಾಗಲಿದ್ದಾರೆ' ಎಂದು ಬಣ್ಣಿಸಿದ್ದಾರೆ.

ಅರುಣ್ ಸಿಂಗ್ ಟ್ವೀಟ್‌

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟ್ವೀಟ್ ಮಾಡಿದ್ದು, ;ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಮೊದಲ ಬಾರಿಗೆ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಸಾಧಿಸಿರುವ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಇನ್ನು ಮುಂದೆಯೂ ಅನೇಕ ಇಂತಹ ಸಾಧನೆಗಳಿಗೆ ಶ್ರೀ ಬೊಮ್ಮಾಯಿ ಅವರು ಸಾಕ್ಷಿಯಾಗಲಿದ್ದಾರೆ' ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಟ್ವೀಟ್

ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದರು. 'ಹುಬ್ಬಳ್ಳಿ - ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿದ ಎಲ್ಲ ಪ್ರಬುದ್ಧ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಚುನಾವಣೆಯಲ್ಲಿ ಜಯಶಾಲಿ ಆಗಿರುವ ಬಿಜೆಪಿ ಅಭ್ಯರ್ಥಿಗಳಿಗೆ ಶುಭಾಶಯ ಕೋರುತ್ತೇನೆ' ಎಂದು ಹೇಳಿದ್ದರು.

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ

ಕಳೆದ ವಾರ ದಾವಣಗೆರೆಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, "ಮುಂದಿನ 2023ರ ವಿಧಾನಸಭೆ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ" ಎಂದು ಹೇಳಿಕೆ ನೀಡಿದ್ದರು. ಕರ್ನಾಟಕ ಬಿಜೆಪಿಯಲ್ಲಿ ಈ ಹೇಳಿಕೆ ಸಂಚಲನ ಉಂಟು ಮಾಡಿದೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯ ಪ್ರವಾಸ ಹೊರಡಲು ಸಿದ್ಧತೆ ನಡೆಸುತ್ತಿರುವಾಗಲೇ ಈ ಹೇಳಿಕೆ ಬಗ್ಗೆ ಭಾರೀ ಚರ್ಚೆಗಳು ಆರಂಭವಾಗಿದೆ. ಕೆಲವು ಹಿರಿಯ ನಾಯಕರು ಅಮಿತ್ ಶಾ ಹೇಳಿಕೆಗೆ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಕುರಿತು ಮಾತನಾಡಿದ್ದು, "ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಎದುರಿಸಲಿದ್ದು, ಇದಕ್ಕೆ ಬಿ. ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನ ನೀಡಲಿದ್ದಾರೆ" ಎಂದು ಹೇಳಿದ್ದಾರೆ.

"ಗಣೇಶ ಹಬ್ಬದ ಬಳಿಕ ಬಿ. ಎಸ್. ಯಡಿಯೂರಪ್ಪ ನಡೆಸಲಿರುವ ರಾಜ್ಯ ಪ್ರವಾಸದಲ್ಲಿ ತಾವೂ ಭಾಗವಹಿಸುತ್ತೇವೆ. ರಾಜ್ಯ ಪ್ರವಾಸದ ಕುರಿತು ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು" ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+