Karnataka New Cabinet: ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾಧ್ಯಮಗಳಿಗೆ ಆತುರ ಎಂದಿದ್ಯಾಕೆ ಸಿಎಂ ಡಿ.ಕೆ ಶಿವಕುಮಾರ್!

Karnataka New Cabinet: ಸಚಿವ ಸಂಪುಟ ವಿಸ್ತರಣೆಯಾಗದೆ ಕರ್ನಾಟಕದಲ್ಲಿ ಸಂಕಷ್ಟ ಎದುರಾಗಿದೆ. ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಿ ಬರೋಬ್ಬರಿ ಒಂದು ತಿಂಗಳ ಮೇಲಾದರೂ ಸಹ 20 ಸಚಿವ ಸ್ಥಾನಗಳು ಖಾಲಿ ಉಳಿದಿವೆ. ಆದರೆ, ಹಲವು ಕಾರಣಗಳಿಗೆ ಸಚಿವ ಸಂಪುಟ ವಿಸ್ತರಣೆಯು ಮುಂದೂಡಿಕೆ ಆಗುತ್ತಲ್ಲೇ ಇದೆ. ಇದೀಗ ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಿಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹೆಚ್ಚು ಚರ್ಚೆ ನಡೆಯುತ್ತಿರುವಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಹೇಳಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

Karnataka New Cabinet

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, "ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ" ಎಂದಿದ್ದಾರೆ. ಅಲ್ಲದೆ ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, "ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಮುಂದುವರಿದು ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಸಚಿವ ಕೃಷ್ಣಬೈರೇಗೌಡ ಅವರಿಗೆ ಪತ್ರ ಬರೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಇನ್ನು ಕರ್ನಾಟಕದಲ್ಲಿ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಚಿವ ಕೃಷ್ಣಬೈರೇಗೌಡ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಸಂಸತ್ತಿನ ಅಧಿವೇಶನವು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಕರ್ನಾಟಕದ ಎಲ್ಲ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರುಗಳನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರದಲ್ಲಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಪುಸ್ತಾವನೆಗಳು ಹಾಗೂ ರಾಜ್ಯದ ಒಟ್ಟಾರೆ ಅಭಿವೃದ್ಧಿಯ ಕುರಿತು ಕೇಂದ್ರ ಸರ್ಕಾರದ ಸಹಕಾರ ಪಡೆಯುವ ಬಗ್ಗೆ ಚರ್ಚಿಸಲು ದಿನಾಂಕ: 27.07.2026 ರಂದು ಸೋಮವಾರ ಸಂಜೆ:6.30 ಗಂಟೆಗೆ ಕರ್ನಾಟಕ ಭವನ-1 (ಕಾವೇರಿ), ನವದೆಹಲಿಯಲ್ಲಿ ಸಭೆಯನ್ನು ಏರ್ಪಾಡು ಮಾಡಲಾಗಿದೆ. ಈ ಸಭೆಗೆ ತಾವು ಸಹ ನನ್ನೊಂದಿಗೆ ಭಾಗವಹಿಸಿ, ತಮ್ಮ ಅಮೂಲ್ಯ ಸಲಹೆ/ಸೂಚನೆಗಳನ್ನು ನೀಡಬೇಕೆಂದು ಕೋರುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+