ಡಿಕೆಶಿ vs ಸಿದ್ದು: ಮೇ 18ಕ್ಕೆ ಕರ್ನಾಟಕ ನೂತನ ಮುಖ್ಯಮಂತ್ರಿ ಪ್ರಮಾಣ ವಚನ; ಕಾರಣ?

ಶನಿವಾರ, ಮೇ 13ರಂದು ಪ್ರಕಟವಾದ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಬಹುಮತ ಪಡೆದುಕೊಂಡಿದೆ. ಒಟ್ಟು 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ರಾಜ್ಯದ ಮತದಾರ ಒಂದೇ ಪಕ್ಷಕ್ಕೆ ಪೂರ್ಣ ಅಧಿಕಾರ ನೀಡಿದ್ದಾರೆ.

ಇನ್ನು ಈವರೆಗೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷ ಈ ಬಾರಿ 66 ಸ್ಥಾನಗಳಲ್ಲಿ ಮಾತ್ರ ಗೆಲುವು ಕಾಣುವಂತಾಯಿತು. ಇದೇ ವೇಳೆ 12 ಪ್ರಭಾವಿ ಸಚಿವರು ಸೇರಿದಂತೆ 59 ಬಿಜೆಪಿ ಶಾಸಕರುಗಳಿಗೆ ಮತದಾರರು ಮನೆ ದಾರಿ ತೋರಿಸಿದ್ದಾರೆ. ಈ ಮೂಲಕ ಬಿಜೆಪಿಯನ್ನು ರಾಜ್ಯದ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.

Karnataka New Chief Minister Sworn Ceremony On May 18; Here Is The Reason

ಇದೀಗ 2023ರ ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಪಕ್ಷ, ಇದೀಗ ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸುತ್ತಿದೆ. ಸಿಎಂ ರೇಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ.

ಇದಕ್ಕೂ ಮೊದಲು ಸೋಮವಾರ, ಮೇ 15ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭ ಎಂದು ಹೇಳಲಾಗಿತ್ತು. ಆದರೆ, ಇನ್ನೂ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿಲ್ಲದ ಕಾರಣ, ಸಿಎಂ ಪ್ರಮಾಣವಚನ ಸಮಾರಂಭವನ್ನು ಕಾಂಗ್ರೆಸ್ ಮುಂದೂಡಿದೆ ಎನ್ನಲಾಗಿದೆ.

ಗುರುವಾರ, ಮೇ 18ರಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

Karnataka New Chief Minister Sworn Ceremony On May 18; Here Is The Reason

ಈಗಾಗಲೇ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಎಐಸಿಸಿ ಮೂವರು ವೀಕ್ಷಕರನ್ನು ನೇಮಕ ಮಾಡಿದೆ. ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಅವರು ವೀಕ್ಷಕರಾಗಿ ಬಂದು ಸಭೆಯಲ್ಲಿ ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ.

ಬಳಿಕ ಎರಡೂ ನಾಯಕರನ್ನು ಮನವೊಲಿಸಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಅನಂತರ ಒಂದೆರೆಡು ದಿನದಲ್ಲಿ ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದು, ಇದೇ ವೇಳೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್‌ ಆಹ್ವಾನ ಕಳುಹಿಸಿದೆ ಎಂದು ತಿಳಿದುಬಂದಿದೆ.

Karnataka New Chief Minister Sworn Ceremony On May 18; Here Is The Reason

ಭಾನುವಾರದ ಸಿಎಲ್‌ಪಿ ಸಭೆ ಕುರಿತು ದೆಹಲಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಲ್‌ಪಿ ಸಭೆಯ ವರದಿಯನ್ನು ವೀಕ್ಷಕರು ಹೈಕಮಾಂಡ್‌ಗೆ ಹಸ್ತಾಂತರಿಸಲಿದ್ದಾರೆ. ನಂತರ ಸಿಎಂ ಹೆಸರನ್ನು ಘೋಷಿಸಲು ಹೈಕಮಾಂಡ್ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟದಲ್ಲಿ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರಮುಖ 5 ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+