ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿ ಗ್ಯಾಂಗ್ ರೇಪ್ : ಐವರ ಬಂಧನ

|
Google Oneindia Kannada News

ಬೆಂಗಳೂರು, ಜೂನ್, 2 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

2 ಗಂಟೆ : ಹುಬ್ಬಳ್ಳಿಯ ರಾಯನಾಳ ಗ್ರಾಮದಲ್ಲಿ ಮಹಿಳೆ ಮತ್ತು ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

arrest

12 ಗಂಟೆ : ಬೆಂಗಳೂರಿನ ಸಿದ್ದಾಪುರ ಬಳಿಯ ಜೈ ಭುವನೇಶ್ವರಿ ಸ್ಲಂ ಒತ್ತುವರಿ ತೆರವಿಗೆ ಮುಂದಾದ ಬಿಬಿಎಂಪಿ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, 100ಕ್ಕೂ ಹೆಚ್ಚು ನಿವಾಸಿಗಳನ್ನು ಬಂಧಿಸಲಾಗಿದೆ. [ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ]

11 ಗಂಟೆ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಧ್ಯಾಹ್ನ 1 ಗಂಟೆಗೆ ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರನ್ನು ಭೇಟಿಯಾಗಲಿದ್ದಾರೆ. ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದು, ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ.

10 ಗಂಟೆ : ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಬುಧವಾರ ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಶಿವಮೊಗ್ಗದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿ ದರ್ಜೆ ನೌಕರ ಮನೆ ಮೇಲೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

9.15 : ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ದೆಹಲಿ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ದೆಹಲಿಗೆ ಪ್ರಯಾಣ ಬೆಳಸಿದ್ದು, ಹೈಕಮಾಂಡ್ ನಾಯಕರ ಜೊತೆ ಈ ಕುರಿತು ಮಾತುಕತೆ ನಡೆಸಲಿದ್ದಾರೆ. [ಬುಧವಾರ ದೆಹಲಿಗೆ ತೆರಳಲಿದ್ದಾರೆ ಸಿಎಂ]

9 ಗಂಟೆ : ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಬೇಕಾಗಿತ್ತು. ಆದರೆ, ಗೋಪಿನಾಥ್ ಮುಂಡೆ ಅವರ ಸಾವಿನಿಂದಾಗಿ ಇದನ್ನು ಮುಂದೂಡಲಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

8.30 : ಮಂಡೂರಿನಲ್ಲಿ ಕಸ ಸುರಿಯುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದು, ಗ್ರಾಮದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. [ಮಂಡೂರಿನ ಕಸದ ಸಮಸ್ಯೆ ಚಿತ್ರಗಳು]

English summary
Karnataka top news in brief for the day : CM Siddaramaiah left for New Delhi to meet high-command leaders. On Wednesday he will meet Railway Minister DV Sadananda Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X