ಜುಲೈ 5ರಂದು ಕರ್ನಾಟಕ ಬಂದ್ : ವಾಟಾಳ್ ನಾಗರಾಜ್

ಮಂಡ್ಯ, ಮೇ.14 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

2.30 : ಕನ್ನಡ ವಿರೋಧಿ ಖಾಸಗಿ ಶಾಳೆಗಳ ನಿಲವನ್ನು ಖಂಡಿಸಿ ಜುಲೈ 5ರಂದು ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದ್ದಾರೆ.

vatal nagaraj

1.30 : ಬೆಂಗಳೂರಿನ ಜನರಿಗೆ ನೀರಿನ ದರ ಹೆಚ್ಚಳದ ಶಾಕ್ ಕೊಟ್ಟ ಜಲಮಂಡಳಿ. [ವಿವರಕ್ಕಾಗಿ ಇಲ್ಲಿ ನೋಡಿ]

12.30 : ಸಚಿವರ ಒಂದು ವರ್ಷದ ಕಾರ್ಯವೈಖರಿ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಅತೃಪ್ತಿ ವ್ಯಕ್ತಪಡಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್

11.30 : ಲೋಕಸಭೆ ಚುನಾವಣೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್.ಹಿರೇಮಠ್ ವಿರುದ್ಧ ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

11 ಗಂಟೆ : ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರಾಣೆಬೆನ್ನೂರು ಕ್ಷೇತ್ರದ ಶಾಸಕ ಕೆ.ಬಿ.ಕೋಳಿವಾಡ ಇಂದು ಕುಮಾರಕೃಪಾ ಅತಿಥಿ ಗೃಹದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.

10 ಗಂಟೆ : ಮೇ 9ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರವಾಡ ಲೋಕಾಯುಕ್ತ ವಿಭಾಗದ ಅಧಿಕಾರಿ ಬಸವರಾಜ ಬುರಡಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಸವರಾಜ್ ಪ್ರಯಾಣಿಸುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಅವರು ಗಾಯಗೊಂಡಿದ್ದರು.

9.30 : ಸಿಎಂ ಸಿದ್ದರಾಮಯ್ಯ ಸರ್ಕಾರ ಮೇ 13ರಂದು ಒಂದು ವರ್ಷ ಪೂರ್ಣಗೊಳಿಸಿದೆ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಮನ್ವಯ ಸಮತಿ ಸಭೆ ನಡೆಯಲಿದೆ.

9 ಗಂಟೆ : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾಗಿದ್ದು 9 ಜನರು ಸಾವನ್ನಪ್ಪಿದ್ದಾರೆ. [ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ]

ಬೆಳಗ್ಗೆ 8.30 : ಬೆಂಗಳೂರಿನ ಜನರಿಗೆ ಇಂದು ನೀರಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ನೀರಿನ ದರ ಹೆಚ್ಚಳದ ಕುರಿತು ಚರ್ಚಿಸಲು ಮಧ್ಯಾಹ್ನ 3 ಗಂಟೆಗೆ ಜಲಮಂಡಳಿ ಅಧಿಕಾರಿಗಳು ಸಭೆ ಕರೆದಿದ್ದಾರೆ. [ನೀರಿನ ದರ ಎಷ್ಟು ಹೆಚ್ಚಾಗುತ್ತೆ?]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+