ಟೋಲ್ ವಿರುದ್ಧ ಪ್ರತಿಭಟನೆ, ನಿಖಿಲ್ ಗೌಡ ಬಂಧನ
ಬೆಂಗಳೂರು, ಮೇ.14 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
12.30 : ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಜೆಡಿಎಸ್ ಯುವ ಮುಖಂಡ ನಿಖಿಲ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

11.30 : ಸರ್ಕಾರ ಒಂದು ವರ್ಷದಲ್ಲಿ ಜನರಿಗೆ ನೀಡಿದ್ದ ಹಲವಾರು ಭರವಸೆಗಳನ್ನು ಈಡೇರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. [ಸಿಎಂ ಪತ್ರಿಕಾಗೋಷ್ಠಿಯ ವಿವರಗಳು]
10.30 : ಸಕ್ಕರೆ ಮತ್ತು ಮುಜರಾಯಿ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸರ್ಧಿಸಿ ಅವರು ಚುನಾವಣೆಯಲ್ಲಿ ಜಯಗಳಿಸಿದ್ದರು. [ಸಚಿವ ಸ್ಥಾನ ತೊರೆಯುತ್ತೇನೆ : ಹುಕ್ಕೇರಿ]
9.30 : ಸಿಎಂ ಸಿದ್ದರಾಮಯ್ಯ ಸರ್ಕಾರ ಮೇ 13ರಂದು ಒಂದು ವರ್ಷ ಪೂರ್ಣಗೊಳಿಸಿದೆ. ಇಂದು ಸಿಎಂ ಸಿದ್ದರಾಮಯ್ಯ 12 ಗಂಟೆಗೆ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಸರ್ಕಾರದ ಸಾಧನೆಗಳ ವಿವರಣೆ ನೀಡಲಿದ್ದಾರೆ.
ಸಮಯ 9 : ಹಾಸನ ಜಿಲ್ಲಾಸ್ಪತ್ರೆಯಲ್ಲಿ ರೂಪಾ ಎಂಬ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಹೆಚ್ಚಿನ ಪ್ರಮಾಣದ ಅರಿವಳಿಕೆ ಮದ್ದು ನೀಡಿದ್ದರಿಂದ ರೂಪಾ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಸಮಯ 8.30 : ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಅವೈಜ್ಞಾನಿಕವಾಗಿ ಟೋಲ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ, ಇಂದು ಜೆಡಿಎಸ್ ಯುವ ಮುಖಂಡರಾದ ನಿಖಿಲ್‍ಗೌಡ ನೇತೃತ್ವದಲ್ಲಿ ಟೋಲ್ ಗೆ ಮುತ್ತಿಗೆ ಹಾಕಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಶಾಸಕರಾದ ಪಿಳ್ಳಮುನಿಸ್ವಾಮಪ್ಪ, ರಾಜಣ್ಣ ಹಾಗೂ ಯುವ ಮುಖಂಡರಾದ ಮಹೇಂದ್ರಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications