ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಸೋಮವಾರದ ತುಣುಕು ಸುದ್ದಿ

|
Google Oneindia Kannada News

ಬೆಂಗಳೂರು, ನ. 10 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 5 ಗಂಟೆ : 'ನನ್ನ ಅಧಿಕಾರಾವಧಿ ಮುಗಿದ ಬಳಿಕ ಬೇರೆ ಪಕ್ಷ ಸೇರುತ್ತಾನೆ. ಕುಮಾರಸ್ವಾಮಿ, ದೇವೇಗೌಡರು ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಕಡೆಗಣಿಸುತ್ತಿದ್ದಾರೆ' ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

ಸಮಯ 4 ಗಂಟೆ : ನೆಲಮಂಗಲದ ಬೆಮಲ್ ಕೃಷ್ಣಪ್ಪ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಾಗೇಶನನ್ನು ಪೊಲೀಸರು ಬಂಧಿಸಿದ್ದಾರೆ. ಬೆತ್ತನಗೆರೆ ಸೀನನ ಆಪ್ತನಾದ ಈತನನ್ನು ನೆಲಮಂಗಲ ಪೊಲೀಸರು ಇಂದು ಬಂಧಿಸಿದ್ದಾರೆ.

ಸಮಯ 3 ಗಂಟೆ : ಡೀಸೆಲ್ ಬೆಲೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಕೆಎಸ್ಆರ್‌ಟಿಸಿ ಪ್ರಯಾಣ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಇಂದು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದೆ.

Karnataka

ಸಮಯ 2 ಗಂಟೆ : ತೀರ್ಥಹಳ್ಳಿಯಲ್ಲಿ ನ.15ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನಂದಿತಾ ಅಪಹರಣ ಮತ್ತು ಸಾವಿನ ನಂತರ ನ.10ರ ವರೆಗೆ ಪಟ್ಟಣದಲ್ಲಿ ಸೆಕ್ಷನ್ 144ರ ಪ್ರಕಾರ ನಿಷೇಧಾಜ್ಞೆ ಹೇರಲಾಗಿತ್ತು. ಯಥಾಸ್ಥಿತಿ ಮುಂದುವರೆಸುವಂತೆ ಪೊಲೀಸರು ಮನವಿ ಮಾಡಿದ ಹಿನ್ನಲೆಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ.

ಸಮಯ 12.45 : ಪ್ರಧಾನಿ ಮೋದಿ ಡಿವಿ ಸದಾನಂದ ಗೌಡ ಖಾತೆ ಬದಲಾವಣೆ ಮಾಡಿದ್ದು, ಸರಿಯಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಪ್ರಭಾವಿ ಖಾತೆಗಳನ್ನು ಬೇರೆ ರಾಜ್ಯದವರಿಗೆ ಕೊಟ್ಟು, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ಸಮಯ 12 ಗಂಟೆ : ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದೆ, ಮಂತ್ರಿಮಾಲ್ ಬಳಿ ಇರುವ ರತನಂ ಲಾಡ್ಜ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಓರ್ವನನ್ನು ಬಂಧಿಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಪಿಜಿಯಲ್ಲಿದ್ದ ಯುವತಿಯರನ್ನು ದಂಧೆಗೆ ದೂಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಸಮಯ 11 ಗಂಟೆ : ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ತುಂಗಭದ್ರಾ ನದಿ ನೀರು ಹಂಚಿಕೆ ಕುರಿತು ಸಭೆ ಆರಂಭವಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದೆ. ಸಚಿವರಾದ ಟಿ.ಬಿ.ಜಯಚಂದ್ರ, ಎಂ.ಬಿ.ಪಾಟೀಲ್ ಮುಂತಾದರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಸಮಯ 10 ಗಂಟೆ : ಹಾಸನದ ಗಾಂಧಿಬಜಾರ್‍ನಲ್ಲಿರುವ ತೇರಾಫತ್ ಸಭಾಭವನದಲ್ಲಿ ಇಂದು ನಡೆಯಬೇಕಾಗಿದ್ದ ಅಪ್ರಾಪ್ತ ಬಾಲಕಿ ವಿವಾಹವನ್ನು ಪೊಲೀಸರು ಮತ್ತು ಅಧಿಕಾರಿಗಳು ತಡೆದಿದ್ದಾರೆ. 16 ವರ್ಷದ ಬಾಲಕಿಗೆ 32 ವರ್ಷದ ವರನೊಂದಿಗೆ ಮದುವೆ ನಿಶ್ಚಯವಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಹಾಸನ ತಹಶೀಲ್ದಾರ್ ಮಂಜುನಾಥ್ ಅವರು, ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿ ವಿವಾಹವನ್ನು ನಿಲ್ಲಿಸಿದ್ದಾರೆ.

ಸಮಯ 9 ಗಂಟೆ : ಜಮ್ಮು ಮತ್ತು ಕಾಶ್ಮೀರದ ಕಮಾಲ್‌ಕೋಟ್‌ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರ ಪಾಕ್‌ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಕರ್ನಾಟಕದ ಯೋಧರೊಬ್ಬರು ವೀರಮರಣವನ್ನಪ್ಪಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಯೋಧ ಮಲ್ಲಪ್ಪ ಬಸವಣ್ಣೆಪ್ಪ ಚನ್ನಳ್ಳಿ (42) ಪಾಕ್‌ ಸೈನಿಕರ ಗುಂಡಿನ ದಾಳಿಯಲ್ಲಿ ಹುತಾತ್ಮನಾದ ಯೋಧ. ಮಂಗಳವಾರ ಯೋಧನ ಮೃತದೇಹ ಗದಗಕ್ಕೆ ಆಗಮಿಸಲಿದೆ.

ಸಮಯ 8 ಗಂಟೆ : ತುಂಗಭದ್ರಾ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬುಬಾಯ್ಡು ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಲಿದ್ದಾರೆ. ಸಿಎಂ ಗೃಹ ಕಚೇರಿಯಲ್ಲಿ ಈ ಸಭೆ ನಡೆಯಲಿದೆ.

ಸಮಯ 7.30 : ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಹಳೇಪೇಟೆ ಬಡಾವಣೆಯಲ್ಲಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸೌಮ್ಯ (28), ಲೋಕೇಶ್ (32) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಇವರ ವಿವಾಹವಾಗಿತ್ತು.

English summary
Karnataka top news in brief for the day : Andhra Pradesh Chief Minister N Chandrababu Naidu to meet Karnataka CM Siddaramaiah in Bengaluru over tungabhadra water dispute.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X