• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ಸೋಮವಾರದ ತುಣುಕು ಸುದ್ದಿ

|

ಬೆಂಗಳೂರು, ನ. 17 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 4.30 : ಪೆರ್ಡೂರಿನ ಕುಕ್ಕಿಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂಬ್ಳೆ ಎಂಬಲ್ಲಿ ಚಿರತೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವವರನ್ನು ಮಂಜುನಾಥ ನಾಯ್ಕ (55) ಎಂದು ಗುರುತಿಸಲಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಮಯ 3.45 : ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿನ ಪಂಡರಹಳ್ಳಿಯಲ್ಲಿ ಶನಿವಾರ ಮಹಿಳೆಯನ್ನು ಕೊಂದು ಹಾಕಿದ್ದ ಹುಲಿಯನ್ನು ಸೆರೆಹಿಡಿಯಲಾಗಿದೆ. ಅರವಳಿಕೆ ಚುಚ್ಚುಮದ್ದು ನೀಡಿ ಇಂದು ಮಧ್ಯಾಹ್ನ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಗ್ರಾಮದ ಸಮೀಪದಲ್ಲಿ ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಹುಲಿ ಪ್ರತ್ಯಕ್ಷವಾಗಿದ್ದು,

ಸಮಯ 2 ಗಂಟೆ : ನ.19ರಿಂದ 21ವರೆಗೆ ಗಾಂಧಿ ಕೃಷಿ ವಿದ್ಯಾಲಯದ ಆವರಣದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ರಾಜ್ಯಪಾಲ ವಜೂಭಾಯಿ ವಾಲಾ ಉದ್ಘಾಟಿಸಲಿದ್ದಾರೆ. ಈ ವರ್ಷದ ಕೃಷಿ ಮೇಳದಲ್ಲಿ ಹೊಸ ತಳಿಗಳ ಪರಿಚಯ ಮಾಡಲಿದ್ದು, ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ಪಡೆಯಬಹುದಾದ ಚಕ್ಕೊತ್ತ ಬೆಳೆಯ 7ತಳಿಗಳನ್ನು ಪರಿಚಯಿಸಲಾಗುತ್ತದೆ.

ಸಮಯ 1 ಗಂಟೆ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಲ್ಕೋಡ ಗ್ರಾಮದ ಎನ್.ಜಿ.ನಾಯಕ ತಾಂಡದ ನಿವಾಸಿ ರುಕ್ಮಿಣಿ ಹಾಗೂ ವೆಂಕಟೇಶ ದಂಪತಿಗೆ ಜನಿಸಿದ್ದ ಮಗು ಮೃತಪಟ್ಟಿದೆ. ಈ ಮಗುವಿಗೆ ಹೃದಯ ಎದೆಯ ಮೇಲ್ಭಾಗದಲ್ಲೇ ಮಿಡಿಯುತ್ತಿತ್ತು. ಇಂದು ಶಸ್ತ್ರ ಚಿಕಿತ್ಸೆ ನಡೆಸಲು ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ, ಇಂದು ಮುಂಜಾನೆ ಮಗು ಮೃತಪಟ್ಟಿದೆ.

ಸಮಯ 12 ಗಂಟೆ : ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಬೇಕು ಮತ್ತು 11 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಮಠಾಧೀಶರು ಫ್ರೀಡಂ ಪಾರ್ಕ್‌ನಲ್ಲಿ ಮೂರು ದಿನಗಳ ನಿರಶನ ಆರಂಭಿಸಿದ್ದಾರೆ. ಸಿಎಂ ಅಥವ ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದರೆ ನಿರಶನ ವಾಪಸ್ ಪಡೆಯಲಿದ್ದೇವೆ ಎಂದು ನಿಡುಮಾಮಿಡಿ ಮಠದ ಚನ್ನಮಲ್ಲ ವೀರಭದ್ರ ಸ್ವಾಮೀಜಿ ಹೇಳಿದ್ದಾರೆ.

ಸಮಯ 11 ಗಂಟೆ : ಹುಬ್ಬಳ್ಳಿಯ ನೇಕಾರ ನಗರದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ಮಹಿಳೆಯ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿತ್ತು.

ಸಮಯ 10.10 : ಹುಬ್ಬಳ್ಳಿಯ ನೇಕಾರ ನಗರದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಕಸಬಾ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಯಶೋಧಾ (30) ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಮಯ 9.23 : ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಬೇಕು ಮತ್ತು 11 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಮಠದ ಸ್ವಾಮೀಜಿಗಳು ಮೂರುದಿನಗಳ ನಿರಶನವನ್ನು ಬೆಂಗಳೂರಿನಲ್ಲಿ ನಡೆಸಲಿದ್ದಾರೆ. ಇಂದು ಫ್ರೀಡಂ ಪಾರ್ಕ್‌ನಲ್ಲಿ ನಿರಶನ ಆರಂಭವಾಗಲಿದ್ದು, 208 ಸ್ವಾಮೀಜಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಮಯ 9 ಗಂಟೆ : ಮಾರುತಿ ವ್ಯಾನ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೆಂಗಳೂರು ಮೂಲದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ಸಾವನ್ನಪ್ಪಿದ ಎಲ್ಲರೂ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದರು. ಹಿರಿಯೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಸಮಯ 8 ಗಂಟೆ : ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿನ ಪಂಡರಹಳ್ಳಿಯಲ್ಲಿ ಶನಿವಾರ ಮಹಿಳೆಯನ್ನು ಕೊಂದು ಹಾಕಿದ್ದ ಹುಲಿ ಗ್ರಾಮದ ಸಮೀಪದಲ್ಲಿ ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಮತ್ತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹುಲಿಯನ್ನು ಹಿಡಿಯಲು ಬೋನನ್ನು ಅಳವಡಿಸಲಾಗಿದೆ. ಆದರೆ, ಅದು ಇನ್ನೂ ಸೆರೆ ಸಿಕ್ಕಿಲ್ಲ. [ಪಂಡರಹಳ್ಳಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ]

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka top news in brief for the day : Three persons were killed and Two others injured when a car hit the truck in K.R.Halli gate in Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more