• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ಬುಧವಾರದ ತುಣುಕು ಸುದ್ದಿ

|

ಬೆಂಗಳೂರು, ನ. 19 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 5 ಗಂಟೆ : ಮೇಕೆದಾಟು ಬಳಿ ನಿರ್ಮಿಸಲು ಉದ್ದೇಶಿಸಿರುವ ಎರಡು ಜಲಾಶಯಗಳ ನಿರ್ಮಾಣಕ್ಕೆ ಯಾವುದೇ ಕಾನೂನು ತೊಡಕು ಉಂಟಾಗದು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ತಮಿಳುನಾಡಿಗೆ ತಿರುಗೇಟು ನೀಡಿದ್ದಾರೆ.

ಸಮಯ 4 ಗಂಟೆ : ಮೂಢನಂಬಿಕೆಗಳ ನಿಷೇಧ ಕಾಯ್ದೆ ಜಾರಿ ಸೇರಿದಂತೆ ನಮ್ಮ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ನಾವು ನಡೆಸುತ್ತಿರುವ ಮುಷ್ಕರವನ್ನು ಹಿಂಪಡೆಯುತ್ತಿದ್ದೇವೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

ಸಮಯ 3 ಗಂಟೆ : ಬೆಂಗಳೂರಿನಲ್ಲಿ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿದ್ದ ಕಿರಣ್ ಕುಮಾರ್ ಎಂಬುವವರನ್ನು ಕೊಲೆ ಮಾಡಲಾಗಿದೆ. ಬನಶಂಕರಿ 17ನೇ ಕ್ರಾಸ್‌ನಲ್ಲಿರುವ ಕಿರಣ್ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಸಮಯ 2 ಗಂಟೆ : ಹೊಳಲ್ಕೆರೆಯಲ್ಲಿ ಇಂದು ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರ ಹಿರಿಯ ಪುತ್ರಿ ಅನುಪಮಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸಮಯ 1 ಗಂಟೆ : ಕಿಸ್‌ ಆಫ್‌ ಲವ್‌ಗೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ನೈತಿಕ ಪೊಲೀಸ್​ ಗಿರಿಯ ವಿರುದ್ಧ ಪ್ರತಿಭಟನಾಕಾರರು ಕಾನೂನು ರೀತಿಯಲ್ಲಿ ಪ್ರತಿಭಟನೆ ಮಾಡಿದರೆ, ಯಾವುದೇ ಅಭ್ಯಂತರವಿಲ್ಲ. ಕಾನೂನು ಮೀರಿ, ಅಸಭ್ಯವಾಗಿ ನಡೆದುಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಮಯ 12 ಗಂಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಿಮಗೆಲ್ಲ ಮಾದರಿ ಯುವ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದು ಮ್ಯಾಜಿಕ್‌ ಅಲ್ಲ. ಮುಖ್ಯಮಂತ್ರಿ ಆಗಲು ಅವರ ಪರಿಶ್ರಮವೇ ಕಾರಣ. ಇದು ನಿಮಗೆಲ್ಲ ಮಾದರಿಯಾಗಬೇಕು ಎಂದರು.

ಸಮಯ 11 ಗಂಟೆ : ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸ್ವಾಮೀಜಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ಮುಕ್ತಾಯವಾಗಿದೆ. ಧರಣಿ ಸ್ಥಳಕ್ಕೆ ಸರ್ಕಾರದ ಪರವಾಗಿ ಸಚಿವರು ಬಂದು ನಿರ್ಧಾರ ಪ್ರಕಟಿಸುತ್ತಾರೆ ಎಂದು ಸ್ವಾಮೀಜಿಗಳಿಗೆ ಭರವಸೆ ನೀಡಿದ ಸಿಎಂ.

ಸಮಯ 10 : ಬೆಂಗಳೂರಿನ ಜಾಲಹಳ್ಳಿ ಬಳಿ ಇರುವ ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಶಾಲೆಯಿಂದ ಪ್ರಿ ನರ್ಸರಿ, 6 ಹಾಗೂ 7ನೇ ತರಗತಿಗಳನ್ನು ಬುಧವಾರದಿಂದಲೇ ಬೇರೆ ಶಾಲೆಗೆ ವರ್ಗಾಯಿಸಬೇಕೆಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ಸೂಚಿಸಿದೆ. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಡಿಡಿಪಿಐ ಜೊತೆ ಮಾತುಕತೆ ನಡೆಸುತ್ತಿದ್ದಾರೆ.

ಸಮಯ 9 ಗಂಟೆ : ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಪುನಃ ಕರಡಿ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದೆ. ಸೋಮವಾರ ಕರಡಿ ದಾಳಿಯಿಂದಾಗಿ ಸೋಮಣ್ಣ ಎಂಬ ರೈತ ಸಾವನ್ನಪ್ಪಿದ್ದ ಮತ್ತು ತಿಮ್ಮಣ್ಣ ಎಂಬುವವರು ಗಾಯಗೊಂಡಿದ್ದರು. ಪೊಲೀಸರು ಗುಂಡು ಹಾರಿಸಿ ಕರಡಿಯನ್ನು ಕೊಂದು ಹಾಕಿದ್ದರು.

ಸಮಯ 8.30 ಗಂಟೆ : ಬೆಂಗಳೂರಿನ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ನಡೆದು ಇಂದಿಗೆ ಒಂದು ವರ್ಷಗಳಾಗಿವೆ. ಹಲ್ಲೆ ಮಾಡಿದ ಆರೋಪಿ ಇನ್ನೂ ಪತ್ತೆಯಾಗಿಲ್ಲ. [ಎಟಿಎಂ ದಾಳಿಗೆ ಒಂದು ವರ್ಷ]

ಸಮಯ 7.30 : ಜಿಕೆವಿಕೆಯಲ್ಲಿ ಇಂದು 'ಕೃಷಿ ಮೇಳ - 2014'ಕ್ಕೆ ಚಾಲನೆ ದೊರೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಕೃಷಿಮೇಳಕ್ಕೆ ಚಾಲನೆ ನೀಡಲಿದ್ದಾರೆ. ಕೃಷಿ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಕೌಶಿಕ್ ಮುಖರ್ಜಿ ಭಾಗವಹಿಸಲಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka top news in brief for the day : University of Agricultural Sciences, Bengaluru annual Krishi Mela – 2014 at GKVK campus from November 19 to 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more