ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ : ಗುರುವಾರದ ತುಣುಕು ಸುದ್ದಿ

|
Google Oneindia Kannada News

ಬೆಂಗಳೂರು, ನ. 27 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 5 ಗಂಟೆ : ರಾಘವೇಶ್ವರ ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ತಡೆ ನೀಡಿರುವ ಹೈಕೋರ್ಟ್‌ನಲ್ಲಿ ವಿಚಾರಣೆ ಮುಕ್ತಾಯಗೊಂಡಿದ್ದು, ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ.

ಸಮಯ 4 ಗಂಟೆ : ಬೆಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಷರತ್ತು ಬದ್ಧ ಜಾಮೀನು ನೀಡಿದೆ. ಆದರೆ, ಜನಾರ್ದನ ರೆಡ್ಡಿ ಅವರಿಗೆ ಸದ್ಯ ಬಿಡುಗಡೆ ಭಾಗ್ಯವಿಲ್ಲ. ಇನ್ನೂ ಎರಡು ಪ್ರಕರಣಗಳಲ್ಲಿ ಜಾಮೀನು ದೊರೆಯಬೇಕಾಗಿದೆ.

ಸಮಯ 3 ಗಂಟೆ : ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಇಂದು ಎನ್. ಕೃಷ್ಣಂರಾಜು ಅವರು ಅಧಿಕಾರ ಸ್ವೀಕರಿಸಿದರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೃಷ್ಣಂರಾಜು ಅವರಿಗೆ ಅಭಿನಂದನೆ ಸಲ್ಲಿಸಿದರು.

ಸಮಯ 2 ಗಂಟೆ : ನಿಗಮ-ಮಂಡಳಿ ವಿಚಾರದಲ್ಲಿ ಯಾವುದೇ ಗೊಂದಲ ಬೇಡ, ಪಕ್ಷಕ್ಕಾಗಿ ದುಡಿದವರಿಗೆ ಹುದ್ದೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಮಯ 1 ಗಂಟೆ : ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ನೇಮಕ ಸೇರಿದಂತೆ ವಿವಿಧ ಹಗರಣಗಳ ಸಂಬಂಧ ವಿವಿ ವಿಶ್ರಾಂತ ಕುಲಪತಿ ಡಾ.ಎಚ್.ಬಿ.ವಾಲೀಕಾರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಅನ್ನು ಧಾರವಾಡ ಹೈಕೋರ್ಟ್‌ ಪೀಠ ರದ್ದುಗೊಳಿಸಿದೆ.

ಸಮಯ 12 ಗಂಟೆ : ಬಹುಮಹಡಿ ಕಟ್ಟಡದಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಸಿಂಗಸಂದ್ರದ ಬಳಿ ಈ ಘಟನೆ ನಡೆದಿದ್ದು, ಬೆಳಗ್ಗೆ ಏಳು ಗಂಟೆ ಸುಮಾರಿಗೆ ಯುವಕ ಕಟ್ಟಡವೇರಿದ್ದ. ಪೊಲೀಸರ ಮನವೊಲಿಕೆ ಕಾರ್ಯ ವಿಫಲವಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Karnataka

ಸಮಯ 11 ಗಂಟೆ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಫೋಟೋಗಳನ್ನು ಅಪ್‍ಲೋಡ್ ಮಾಡಿದ್ದಾರೆ ಎಂದು ಹುಬ್ಬಳ್ಳಿಯ ನಗರ ಠಾಣೆಗೆ ದೂರು ನೀಡಿದ್ದಾರೆ.

ಸಮಯ 10 ಗಂಟೆ : ರಾಘವೇಶ್ವರ ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ತಡೆ ನೀಡಿರುವ ಕುರಿತು ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ಮುಂದುವರೆಯಲಿದೆ. ಸಿಐಡಿ ಮತ್ತು ಕೇಂದ್ರ ಸರ್ಕಾರದ ಪರ ವಕೀಲರು ಇಂದು ವಾದ ಮಂಡಿಸಲಿದ್ದಾರೆ.

ಸಮಯ 9 ಗಂಟೆ : ಬೆಂಗಳೂರಿನಲ್ಲಿ ವೈದ್ಯರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ಐವರು ಆರೋಪಿಗಳನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ನಗರದ ಪ್ರತಿಷ್ಠಿತ ಆಸ್ಪತ್ರೆಗಳ ವೈದ್ಯರನ್ನು ಇವರು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸಮಯ 8.15 : ಬೆಂಗಳೂರಿನ ನಾಗವಾರ ಫ್ಲೈ ಓವರ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಐಬಿಎಂ ಉದ್ಯೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರವಾರ ಮುಂಜಾನೆ 1 ಗಂಟೆ ಸುಮಾರಿಗೆ ನಡೆದಿದೆ. ಮೃತಪಟ್ಟವರನ್ನು ಅನೂಪ್ ಸುಂದರ್ ಎಂದು ಗುರುತಿಸಲಾಗಿದ್ದರು, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಯ 8 ಗಂಟೆ : ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 100 ರೌಶಿ ಶೀಟರ್‌ಗಳನ್ನು ವಶಕ್ಕೆ ಪಡೆದಿರುವ ಇನ್ಸ್‌ಪೆಕ್ಟರ್ ಪರಮೇಶ್ವರ್ ಅವರ ನೇತೃತ್ವದ ತಂಡ ಅವರ ಕಾರ್ಯಚಟುಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ.

ಸಮಯ 7.30 : ಮೂತ್ರ ಮಾಡಲೆಂದು ವಾಹನದಿಂದ ಇಳಿದ ಟೆಂಪೋ ಕ್ಲೀನರ್ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಕರ್ನಾಟಕ-ತಮಿಳುನಾಡು ಗಡಿಯ ದಿಂಬಲ್ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಚಾಮರಾಜನಗರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

English summary
Karnataka top news in brief for the day : The Karnataka Cabinet meeting will be held in Kalburgi on November 28, Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X