• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ : ಶುಕ್ರವಾರದ ತುಣುಕು ಸುದ್ದಿ

|

ಬೆಂಗಳೂರು, ನ. 28 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 3 ಗಂಟೆ : ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಕೆರೆಕಾಡು ಎಂಬಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿದ್ದು, ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಸಮಯ 2 ಗಂಟೆ : ಡಾ.ರಾಜ್‌ಕುಮಾರ್ ಪ್ರತಿಷ್ಠಾನದ ಅಡಿಯಲ್ಲಿ ಹಮ್ಮಿಕೊಂಡಿರುವ ರಾಜ್ ಸ್ಮಾರಕ ಲೋಕಾರ್ಪಣೆ ಸಮಾರಂಭ ಶನಿವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಸಮಯ 1 ಗಂಟೆ : ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ವಸತಿ ಸಚಿವ ಅಂಬರೀಶ್ ಗೈರು ಹಾಜರಾಗಿದ್ದಾರೆ. ಡಾ.ರಾಜ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ಕೆಲಸವಿದೆ ಆದ್ದರಿಂದ ಬೆಂಗಳೂರಿನಲ್ಲಿದ್ದೇನೆ ಎಂದು ತಿಳಿಸಿದ್ದಾರೆ. [ವಸತಿ ಸಚಿವ ಅಂಬರೀಶ್ ಗೈರು]

ಸಮಯ 12 ಗಂಟೆ : ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ರೇವುನಾಯಕ್ ಬೆಳಮಗಿ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಗಿದೆ.

ಸಮಯ 11 ಗಂಟೆ : ಒಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ಡಿಸೆಂಬರ್ 15ಕ್ಕೆ ಮುಂದೂಡಿದೆ. ಈಗಾಗಲೇ ರೆಡ್ಡಿ ಅವರಿಗೆ ಮೂರು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ಇನ್ನೂ ಎರಡು ಪ್ರಕರಣಗಳಲ್ಲಿ ಜಾಮೀನು ದೊರೆಯಬೇಕಾಗಿದೆ.

ಸಮಯ 10 ಗಂಟೆ : ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟದ ಸಚಿವರು ಕಲಬುರಗಿಗೆ ಆಗಮಿಸಿದ್ದಾರೆ. 11 ಗಂಟೆಗೆ ಸಚಿವ ಸಂಪುಟ ಸಭೆ ಆರಂಭವಾಗಲಿದೆ.

ಸಮಯ 9 ಗಂಟೆ : ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಕರ್ಕಿಹಳ್ಳಿಯಲ್ಲಿ ನಡೆದಿದೆ.

ಸಮಯ 8 ಗಂಟೆ : ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗೋರೂರು ಬಳಿ ತ್ಯಾಜ್ಯ ವಿಲೀವಾರಿ ಘಟಕ ಸ್ಥಾಪನೆಗೆ ಸರ್ವೆ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ, ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಂಡೆಮಠದ ಬಸವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ಮುಂದುವರೆದಿದೆ. [ಕಸಕ್ಕೆ ಮಾಗಡಿ ಗ್ರಾಮಸ್ಥರ ವಿರೋಧ]

ಸಮಯ 7.30 : ಕುಲಬುರಗಿಯಲ್ಲಿ ಇಂದು 6ನೇ ಸಚಿವ ಸಂಪುಟ ಸಭೆ ನಡೆಯಲಿದೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ 400 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‌ ಅನ್ನು ಸರ್ಕಾರ ಘೋಷಿಸುವ ಸಾಧ್ಯತೆ ಇದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka top news in brief for the day : The Karnataka Cabinet meeting will be held in Kalburgi on November 28, Friday. Govt may announced 400 core package for Hyderabad-Karnataka region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more