ಕರ್ನಾಟಕ : ಶನಿವಾರದ ತುಣುಕು ಸುದ್ದಿ
ಬೆಂಗಳೂರು, ನ. 29 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 2 ಗಂಟೆ : ಗೊರೂರಿನಲ್ಲಿ ಕಸವಿಲೇವಾರಿ ಘಟಕ ಸ್ಥಾಪಿಸುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿರ್ಣಯವನ್ನು ಯುವ ಜೆಡಿಎಸ್ ಘಟಕ ಖಂಡಿಸಿದ್ದು, ಬೆಂಗಳೂರಿನ ಆನಂದರಾವ್ ವೃತ್ತದ ಸಮೀಪದ ಗಾಂಧಿ ಪ್ರತಿಮೆ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಸಮಯ 1 ಗಂಟೆ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪಕ್ಷ ಸಂಘಟನೆಗಾಗಿ ಗ್ರಾಮ ವಾಸ್ತವ್ಯ ಮಾಡಲು ಮುಂದಾಗಿದ್ದಾರೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಿಂದ ವಾಸ್ತವ್ಯ ಆರಂಭಿಸಲಿದ್ದು, ದಿನಾಂಕ ನಿಗದಿಯಾಗಿಲ್ಲ.
ಸಮಯ 12 ಗಂಟೆ : ಮಂಗಳೂರಿನ ಲಾಲ್ ಬಾಗ್‌ನಲ್ಲಿಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವನನ್ನು ಕಿರಣ್ ಕೊಟ್ಯಾನ್ ಎಂದು ಗುರುತಿಸಲಾಗಿದೆ.
ಸಮಯ 11 ಗಂಟೆ : ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಅವರು ಶನಿವಾರ ಮಾತನಾಡಿದರು.
ಸಮಯ 10 ಗಂಟೆ : ಶೇಡ್ ಮೇಲೆ ಕಾಂಪೌಂಡ್ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರಿ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಉದ್ದೇಶ್ ಯಾದವ್ ಎಂದು ಗುರುತಿಸಲಾಗಿದೆ.
ಸಮಯ 9 ಗಂಟೆ : ದಾವಣಗೆರೆ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಸಮಯ 8 ಗಂಟೆ : ವರ ನಟ ಡಾ.ರಾಜ್‌ಕುಮಾರ್ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಸರ್ಕಾರ ಮುಂದಾಗಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ರಾಜ್‌ಕುಮಾರ್ ಸಮಾಧಿ ಸ್ಥಳದಲ್ಲಿ ರೂಪಗೊಂಡಿರುವ ಸ್ಮಾರಕವನ್ನು ಪ್ರವಾಸಿ ಸ್ಥಳವಾಗಿ ಮಾರ್ಪಡಿಸಲು ಪ್ರವಾಸೋದ್ಯಮ ಹಾಗೂ ವಾರ್ತಾ ಇಲಾಖೆ ಚಿಂತನೆ ನಡೆಸಿದೆ.












Click it and Unblock the Notifications