ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಸೋಮವಾರದ ತುಣುಕು ಸುದ್ದಿಗಳು

|
Google Oneindia Kannada News

ಬೆಂಗಳೂರು, ನ. 3 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 5.24 : ಬೆಂಗಳೂರಿನ ಇಂದಿರಾನಗರದ ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆಯನ್ನು ಮೇಲಾಧಿಕಾರಿಗಳ ಆದೇಶ ಬರುವ ತನಕ ಆರಂಭಿಸುವುದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಶಾಲಾ ಆವರಣದಲ್ಲಿ ಫ್ಲೆಕ್ಸ್‌ ಹಾಕಿದೆ.

ಸಮಯ 5 ಗಂಟೆ : ತೀರ್ಥಹಳ್ಳಿಯಲ್ಲಿ ನಡೆದ ನಂದಿತಾ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ನಂದಿತಾ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ನಂದಿತಾ ಡೆತ್‌ನೋಟ್‌ ಅನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. [ತೀರ್ಥಹಳ್ಳಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ]

ಸಮಯ 4 ಗಂಟೆ : ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡುವ ಕುರಿತು ಚಿಂತಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನ.5ರಂದು ಅಧಿಕಾರಿಗಳ ಸಭೆ ಕರೆಯಲಾಗಿದ್ದು ಅಂದು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮಯ 3 ಗಂಟೆ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೂರಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಬಾಲಕಿಯರ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ಇದರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಸಮಯ 2 ಗಂಟೆ : ಡಿಸೆಂಬರ್ 1ರಿಂದ ಮಂಡೂರಿಗೆ ಕಸ ಹಾಕುವುದಿಲ್ಲ ಎಂದು ಬೆಂಗಳೂರು ನಗರದ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕಸವಿಲೇವಾರಿಗೆ ಸಂಬಂಧಿಸಿದಂತ ಹೈಕೋರ್ಟ್ ನಿರ್ದೇಶನದಂತೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ. ಮಾವಳ್ಳಿಪುರ, ಬಂಗೀಪುರ ಮುಂತಾದ ಕಡೆ ಕ್ವಾರಿಗಳಿಗೆ ಕಸ ಹಾಕಲು ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ನಾಲ್ಕೈದು ಕಡೆ ಡಂಪಿಂಗ್ ಯಾರ್ಡ್‍ಗಳನ್ನು ಗುರುತಿಸಿದೆ ಎಂದು ಸಚಿವರು ಹೇಳಿದರು.

ಸಮಯ 1 ಗಂಟೆ : ಕರ್ನಾಟಕ ವಿವಿ ವಿಶ್ರಾಂತ ಕುಲಪತಿ ಎಚ್.ಬಿ. ವಾಲೀಕಾರ ಅವರಿಗೆ ಧಾರವಾಡದ ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಿವಿಯಲ್ಲಿ ನಡೆದಿರುವ ಅಕ್ರಮ ನೇಮಕ ಸೇರಿದಂತೆ ವಿವಿಧ ಹಗರಣಗಳ ಸಂಬಂಧ ವಾಲೀಕಾರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ವಾಲೀಕಾರ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. [ವಿವಿ ಕುಲಪತಿ ಎಚ್.ಬಿ.ವಾಲೀಕಾರ ಬಂಧನ]

ಸಮಯ 12 ಗಂಟೆ : ಮೈಸೂರು ತಾಲೂಕಿನ ಹುಯಿಲಾಳು ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡ ರಾಮಸ್ವಾಮಿ ವಿರುದ್ಧ ಯುವತಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಕುರಿತು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಸ್ವಾಮಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದು, ರಾಮಸ್ವಾಮಿ ಅವರಿಗಾಗಿ ಹುಡುಕಾಟ ಆರಂಭವಾಗಿದೆ.

ಸಮಯ 11 ಗಂಟೆ : ಕರ್ನಾಟಕ ಬಿಟ್ಟು ಹೋಗದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಗೆ ಕೊಳದ ಮಠದ ಶಾಂತವೀರ ಸ್ವಾಮೀಜಿ, ಸ್ವತಂತ್ರ ಬಸವಲಿಂಗ ಶಿವಯೋಗಿ ಶ್ರೀಗಳು, ಶಾಂತ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶಿವರುದ್ರ ಸ್ವಾಮೀಜಿ ಸೇರಿದಂತೆ ಹಲವರು ಸ್ವಾಮೀಜಿಗಳು ಮನವಿ ಮಾಡಿದ್ದಾರೆ.

Karnataka

ಸಮಯ 10 ಗಂಟೆ : ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಶಿಕ್ಷಕ ಜೈಶಂಕರ್ ವಿಚಾರಣೆಯನ್ನು ಬೈಯಪ್ಪನಹಳ್ಳಿ ಪೊಲೀಸರು ಅಂತ್ಯಗೊಂಳಿಸಿದ್ದಾರೆ. ಜೈಶಂಕರ್ ಪೂರ್ವಾಪರ ಮಾಹಿತಿಯನ್ನು ಕಲೆಹಾಕಲು ಎರಡು ತಂಡಗಳನ್ನು ರಚಿಸಿದ್ದು, ಒಂದು ತಂಡವನ್ನು ತಮಿಳುನಾಡಿಗೆ ಕಳುಹಿಸಿದ್ದಾರೆ.

ಸಮಯ 9 ಗಂಟೆ : ಬೆಂಗಳೂರಿನ ಇಂದಿರಾನಗರದ ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆಯಲ್ಲಿ ಇಂದು ಕರೆಯಲಾಗಿದ್ದ ಪೋಷಕ ಸಭೆಯನ್ನು ಮುಂದೂಡಲಾಗಿದೆ. ಈ ಕುರಿತು ಶಾಲೆಯ ಆಡಳಿತ ಮಂಡಳಿ ಪೋಷಕರಿಗೆ ಎಸ್‌ಎಂಎಸ್ ಕಳುಹಿಸಿದೆ.

ಸಮಯ 8 ಗಂಟೆ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಹಂತದ ಸಭೆ ನಡೆಯಲಿದೆ. ಅ.10ರಂದು ನಡೆದ ಮೊದಲನೇ ಹಂತದ ಸಭೆಯಲ್ಲಿ ಸಾಹಿತಿಗಳು, ಕನ್ನಡ ಹೋರಾಟಗಾರರು ಭಾಗವಹಿಸಿದ್ದರು. ಎರಡನೇ ಹಂತದ ಸಭೆಗೆ ಆಯ್ದ ಪ್ರತಿನಿಧಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ.

Thirthahalli

ಸಮಯ 7.30 : 8ನೇ ತರಗತಿ ಬಾಲಕಿ ನಂದಿತಾ ಅಪಹರಣ ಮತ್ತು ಕೊಲೆ ಖಂಡಿಸಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿದೆ. ಶನಿವಾರದಿಂದ ಸ್ವಯಂ ಪ್ರೇರಿತ ಬಂದ್‌ ವೇಲೆ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. ಆದ್ದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್‌ ಅನ್ನು ಮಾಡಲಾಗಿದ್ದು, ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. [ತೀರ್ಥಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಕೊಲೆ, ಅತ್ಯಾಚಾರ ಶಂಕೆ]

English summary
Karnataka top news in brief for the day : 8th standard student murder : Bandh called in Thirthahalli, Shivamogga district on Monday, November 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X