ಕರ್ನಾಟಕದ ಮಂಗಳವಾರದ ತುಣುಕು ಸುದ್ದಿಗಳು

ಬೆಂಗಳೂರು, ನ. 4 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 5 ಗಂಟೆ : ತೀರ್ಥಹಳ್ಳಿ ಮೃತ ಬಾಲಕಿ ನಂದಿತಾ ಮನೆಗೆ ಸಂಸದ ಬಿ.ಎಸ್.ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಂತಾದ ಬಿಜೆಪಿ ನಾಯಕರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಸಮಯ 4 ಗಂಟೆ : ಡೀಸೆಲ್ ದರ ಇಳಿಕೆ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಪರಿಷ್ಕರಿಸುವ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಪ್ರಯಾಣ ದರ ಇಳಿಕೆ ಬಗ್ಗೆ ನಾಳೆ ಮತ್ತೊಮ್ಮೆ ಸಭೆ ನಡೆಸಿ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಸಮಯ 3 ಗಂಟೆ : ಕರೆದಲ್ಲಿಗೆ ಬರಲಿಲ್ಲವೆಂಬ ಆಕ್ರೋಶದಿಂದ ಆಟೋ ಚಾಲಕನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಮಯ 2 ಗಂಟೆ : ತೀರ್ಥಹಳ್ಳಿಯ ನಂದಿತಾ ಅಪಹರಣ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಸಿಐಡಿ ತನಿಖೆಯಿಂದ ಸಂಪೂರ್ಣ ಸತ್ಯ ಹೊರಬರುವುದಿಲ್ಲ, ಆದ್ದರಿಂದ ಸಿಬಿಐಗೆ ವಹಿಸಬೇಕೆಂದು ಅವರು ಮಂಗಳವಾರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಸಮಯ 1 ಗಂಟೆ : ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಹಲವಾರು ಸಮಸ್ಯೆಗಳಿದ್ದು, ಇವುಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಬಹುಜನ ವಿದ್ಯಾರ್ಥಿ ಸಂಘ ನ.6ರಂದು ರಾಜ್ಯಾದ್ಯಂತ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಬಂದ್‌ಗೆ ಕರೆ ನೀಡಿದೆ.

ಸಮಯ 12 ಗಂಟೆ : ನ.5ರ ಬುಧವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಹಾಲಿ ಅಧ್ಯಕ್ಷರಾಗಿದ್ದ ಎಲ್.ಭೈರಪ್ಪ ನಿವೃತ್ತಿಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ವಿವಿಧ ಇಲಾಖೆಗಳ ರಾಜ್ಯದ ಪ್ರತಿನಿಧಿಗಳು ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ. ಅಧ್ಯಕ್ಷ ಗಾದಿಗೆ ಹಾಸನ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಮಂಜೇಗೌಡ, ಮೈಸೂರು ಜಿಲ್ಲಾಧ್ಯಕ್ಷ ರಾಮು, ಹಾಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟೇಲ್ ಪಾಂಡು, ಹಾಲಿ ಉಪಾಧ್ಯಕ್ಷೆ ಶಾರದಮ್ಮ ಆಕಾಂಕ್ಷಿಗಳಾಗಿದ್ದಾರೆ.

ಸಮಯ 11 ಗಂಟೆ : ಬೆಂಗಳೂರಿನ ಇಂದಿರಾನಗರದ ಕೇಂಬ್ರಿಡ್ಜ್ ಶಾಲೆಯನ್ನು ಆರಂಭಮಾಡುವ ಕುರಿತು ಪೋಷಕರಿಗೆ ಎಸ್‌ಎಂಎಸ್ ಕಳುಹಿಸಲಾಗುತ್ತದೆ ಎಂದು ಶಾಲೆ ಆಡಳಿತ ಮಂಡಳಿ ಹೇಳಿದೆ. ಶಾಲೆಯಲ್ಲಿ ಸೂಕ್ತ ಭದ್ರತೆ ಇಲ್ಲ ಎಂದು ಪೋಷಕರು ಆರೋಪಿಸುತ್ತಿದ್ದು. ಅಗತ್ಯ ಭದ್ರತೆ ಒದಗಿಸಿದ ಬಳಿಕ ಶಾಲೆ ಆರಂಭ ಮಾಡುವ ಕುರಿತು ಸೂಚನೆ ನೀಡಲಾಗುತ್ತದೆ ಎಂದು ಶಾಲೆಯ ಆಡಳಿತ ಮಂಡಳಿ ಪೋಷಕರಿಗೆ ಎಸ್‌ಎಂಎಸ್ ಮಾಡಿದೆ.

ಸಮಯ 10 ಗಂಟೆ : ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. 24 ವರ್ಷದ ಮಹಿಳೆ ಮೇಲೆ ಪತಿ, ಅತ್ತೆಯ ಎದುರಲ್ಲೇ ಅತ್ಯಾಚಾರ ನಡೆಸಲಾಗಿದೆ. ಬೆಳ್ಳಂದೂರಿನಲ್ಲಿ ಅ.24ರಂದು ಈ ಘಟನೆ ನಡೆದಿದ್ದು, ಪೊಲೀಸರ ಸೋಗಿನಲ್ಲಿ ಬಂದ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅ.26ರಂದು ಎಚ್‌.ಎಸ್‌.ಆರ್‌.ಲೇಔಟ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

Karnataka

ಸಯಮ 9 ಗಂಟೆ : ನಂದಿತಾ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ತೀರ್ಥಹಳ್ಳಿ ಮತ್ತು ಮಣಿಪಾಲ್ ಆಸ್ಪತ್ರೆ ವೈದ್ಯರು ಈ ಬಗ್ಗೆ ವರದಿ ನೀಡಿದ್ದಾರೆ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲೇ ನಂದಿತಾ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು ಎಂದು ವರದಿಯಲ್ಲಿ ತಿಳಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯಾಂಶ ಹೊರಬರಲಿದೆ. [ನಂದಿತಾ ಡೆತ್‌ ನೋಟ್‌ ಪತ್ತೆ]

ಸಮಯ 8 ಗಂಟೆ : ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಮೊಹರಂ ಮೆರವಣಿಗೆ ನೋಡಲು ಮನೆ ಮನೆಯ ಮೇಲೆ ನಿಂತಿದ್ದಾಗ ಮೇಲ್ಛಾವಣಿ ಕುಸಿತ 25 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ. ಕುಡಿತಿನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.

ಸಮಯ 7.30 : ಬೆಂಗಳೂರಿನ ಬಸವನಗುಡಿಯ ಓಲ್ಡ್ ವೆರ್ಟನರಿ ರಸ್ತೆಯಲ್ಲಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆ. ಕತ್ತುಕೊಯ್ದು ಕೊಲೆ ಮಾಡಿ ಶವವನ್ನು ತಂದು ಎಸೆದಿರುವ ಶಂಕೆ. ಸ್ಥಳಕ್ಕೆ ಧಾವಿಸಿದ ಬಸವನಗುಡಿ ಪೊಲೀಸರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+